ಸಿಎಂ ಸುಳ್ಳು ಹೇಳುವುದರಲ್ಲಿ ನಂಬರ್ 1, ಸಿದ್ದು

ಕೋಲಾರ, ಮಾ. 26 : ರಾಜ್ಯದ ಬಿಜೆಪಿ ಸರ್ಕಾರ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಮುಖ್ಯಮಂತ್ರಿಗಳು ಉದ್ದಟತನದಿಂದ ವರ್ತಿಸುತ್ತಿದ್ದಾರೆ. ಬಡವರ ಕಷ್ಟಸುಖಕ್ಕೆ ಬಾರದ ಸರ್ಕಾರ ಮಠ-ಮಾನ್ಯಗಳಿಗೆ ದುಡ್ಡು ಕೊಡುವುದರಲ್ಲಿ ಮಾತ್ರ ಹಿಂದೆ ಬಿದ್ದಿಲ್ಲ. ರಾಜ್ಯದ ಇತಿಹಾಸದಲ್ಲಿ ಯಡಿಯೂರಪ್ಪನವರಷ್ಟು ಸುಳ್ಳು ಹೇಳುವ ಮುಖ್ಯಮಂತ್ರಿಯನ್ನು ನಾನು ಕಂಡಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಕೋಲಾರದಲ್ಲಿ ಆಯೋಜಿಸಲಾಗಿದ್ದ ಭಾರತ್ ನಿರ್ಮಾಣ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಬಡವರ, ದಲಿತರ ಅಥವಾ ಹಿಂದುಳಿದವರ ಪರ ಅಲ್ಲ. ರಾಜ್ಯದ ಸರ್ವತೋಮುಖ ಅಭಿವೃದ್ದಿ ಬಗ್ಗೆ ಯೋಚಿಸದ ಸರ್ಕಾರ ಬಡವರಿಗೆ ಲ್ಯಾಪ್ ಟಾಪ್ ಕೊಡುವ ಭರವಸೆ ನೀಡಿದೆ. ಬಡವರು ಲ್ಯಾಪ್‌ಟಾಪ್ ತೆಗೆದುಕೊಂಡು ಏನ್ ಉಪ್ಪಿನಕಾಯಿ ಹಾಕಿ ನೆಕ್ಕೋದಾ? ಎಂದು ತನ್ನ ಎಂದಿನ ವ್ಯಂಗ್ಯ ಧಾಟಿಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ತಮ್ಮದು ಸುಸಂಸ್ಕೃತ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ, ಶ್ರೀರಾಮಸೇನೆ ಕಾರ್ಯಕರ್ತರು ಮಂಗಳೂರು ಪಬ್ ಮೇಲೆ ಮತ್ತು ಯುವತಿಯರ ಮೇಲೆ ದಾಳಿ ಮಾಡಿದಾಗ ಏನು ಮಾಡುತ್ತಿತ್ತು. ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚರ್ಚ್ ಮೇಲೆ ದಾಳಿ ನಡೆಯಿತು. ಮಾತೆದ್ದಿದರೆ ಸುಳ್ಳು ಹೇಳುವ ಡೋಂಗಿ ಸರ್ಕಾರ ಇದು ಎಂದು ಸಿದ್ದು ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)
ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ, ದೇವೇಗೌಡ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+