ಮೊರಾದಬಾದಿನಿಂದ ಅಜರುದ್ದೀನ್ ಸ್ಪರ್ಧೆ

Azharuddin to contest from Moradabad
ಲಕ್ನೋ, ಮಾ. 28: ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಅವರು ಉತ್ತರಪ್ರದೇಶದ ಮೊರಾದಬಾದ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರಿದ್ದ ಅಜರುದ್ದೀನ್, ಪಕ್ಷ ಸೂಚಿಸುವ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.

15 ಲೋಕಸಭೆಗೆ ಕಾಂಗ್ರೆಸ್ ಅಜರುದ್ದೀನ್ ಸೇರಿದಂತೆ 14 ಜನ ಅಭ್ಯರ್ಥಿಗಳ ಹೆಸರುಳ್ಳ ಪಟ್ಟಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿತು.ಅಮೇಥಿ ಕ್ಷೇತ್ರದ ರಾಜಮನೆತನ ಸಂಜಯ್ ಸಿಂಗ್ ಅವರು ಸುಲ್ತಾನ್ ಪುರದಿಂದ ಸ್ಪರ್ಧಿಸುತ್ತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸೇರಿದ ಬಿಎಸ್ ಪಿ ಸಂಸದ ರಮೇಶ್ ದುಬೆ, ಮಿರ್ಜಾಪುರದಿಂದ ಕಣಕ್ಕೆ ಇಳಿಯುತ್ತಿದ್ದಾರೆ.

ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಸುಮಾರು 53 ಅಭ್ಯರ್ಥಿಗಳನ್ನು ಹೆಸರಿಸಿದೆ. ಈ ನಡುವೆ ಕರ್ನಾಟಕ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+