ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ

By Staff
|
Google Oneindia Kannada News

HDK alleges violation of Code of Conduct by BJP
ಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಆರೋಪಿಸಿದರು. ನರಸಿಂಹ ಮೂರ್ತಿ ಎಂಬ ಸಾಫ್ಟ್ ವೇರ್ ತಂತ್ರಜ್ಞ ರೂಪಿಸಿರುವ ಅಂತರ್ಜಾಲ ತಾಣ ಉದ್ಘಾಟಿಸಿದ ನಂತರ ಕುಮಾರಸ್ವಾಮಿ ಮಾತನಾಡುತ್ತಿದ್ದರು.

ಸರ್ಕಾರದ ಹಣ ಲೂಟಿ : ಕರ್ನಾಟಕ ಗೃಹ ಅಭಿವೃದ್ಧಿ ಪ್ರಾಧಿಕಾರಕ್ಕಾಗಿ ಮನೆಗಳನ್ನು ನಿರ್ಮಿಸಲು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನ ಹೊರವಲಯದಲ್ಲಿ ಗೃಹ ಸಚಿವ ಕೃಷ್ಣಯ್ಯ ಶೆಟ್ಟಿ ಅಧಿಕ ಬೆಲೆ ನೀಡಿ ರೈತರ ಜಮೀನನ್ನು ವಶಪಡಿಸಿಕೊಂಡು ಸರ್ಕಾರದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದೂ ಕುಮಾರಸ್ವಾಮಿ ಆರೋಪಿಸಿದರು. 4 ಲಕ್ಷ ರು. ಬೆಲೆಯ ಜಮೀನಿಗೆ 53 ಲಕ್ಷ ರು. ನೀಡಿಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇವೆರಡೂ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ವೈವಿಎಸ್ ದತ್ತ ಚುನಾವಣಾ ಆಯೋಗಕ್ಕೆ ಲಿಖಿತ ಆರೋಪ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಜೆಡಿಎಸ್ ಪಕ್ಷದ ವೆಬ್ ಸೈಟನ್ನು ಏಪ್ರಿಲ್ 2ರಂದು ಮೈಸೂರಿನಲ್ಲಿ ಪ್ರಾರಂಭಿಸಲಾಗುತ್ತಿದೆ. ಅದರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ವಿವರ ಮತ್ತು ಪ್ರಣಾಳಿಕೆಯ ವಿವರ ನೀಡಲಾಗುವುದು ಮತ್ತು ಸದ್ಯದಲ್ಲಿಯೇ ಪ್ರಚಾರ ಕಾರ್ಯವನ್ನೂ ಆರಂಭಿಸಲಾಗುವುದು ಎಂದು ಕುಮಾರಸ್ವಾಮಿ ವಿವರಿಸಿದರು.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X