37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.58 ಲಕ್ಷ ವಿದ್ಯಾರ್ಥಿಗಳು | Karnataka SSLC Exam 09 | Exam Helpline | Dyslexic Students - ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.58 ಲಕ್ಷ ವಿದ್ಯಾರ್ಥಿಗಳು - Kannada Oneindia

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.58 ಲಕ್ಷ ವಿದ್ಯಾರ್ಥಿಗಳು

8.58 lakh students to appear for SSLC from March 30
ಬೆಂಗಳೂರು, ಮಾರ್ಚ್.29: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 30ರಿಂದ ಏಪ್ರಿಲ್ 8ರ ವರೆಗೆ ನಡೆಯಲಿದ್ದು, ಒಟ್ಟು 8,58,391 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಜಿ. ಕುಮಾರನಾಯಕ್ ಅವರು, ರಾಜ್ಯದಲ್ಲಿ ಈ ಬಾರಿ ಕಳೆದ ವರ್ಷಕ್ಕಿಂತ 20 ಸಾವಿರ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 2762 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.ಈ ವರ್ಷ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ 4,64,053 ಬಾಲಕರು ಹಾಗೂ 3,94,338 ಬಾಲಕಿಯರಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ 117 ಕೇಂದ್ರಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗಿದೆ ಎಂದರು.

ಅಕ್ರಮ ತಡೆಗೆ ಕ್ರಮ: ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಇಲಾಖೆಯು ಸೂಕ್ತ ಕ್ರಮ ಕೈಗೊಂಡಿದ್ದು, 338 ಸೂಕ್ಷ್ಮ ಹಾಗೂ 152 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ, ಈ ಕೇಂದ್ರಗಳಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಸ್ಥಾನಿಕ ವಿಚಕ್ಷಣ ದಳ ನೇಮಕ ಮಾಡಲಾಗಿದ್ದು, ಸಂಚಾರಿ ಜಾಗೃತ ದಳಗಳೂ ಸೂಕ್ಷ, ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಪದೇ ಪದೇ ಭೇಟಿ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಪ್ರತಿ ಜಿಲ್ಲೆಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದ್ದು, ಆಯಾ ಜಿಲ್ಲೆಯ ಅಧಿಕಾರಿಗಳ ಸಹಕಾರದೊಂದಿಗೆ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕ್ರಮ ಕೈಗೊಂಡಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ ಸುಮಾರು 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಜಿಲ್ಲಾಧಿಕಾರಿಗಳನ್ನು ಕೋರಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ನೆರವನ್ನು ಇಲಾಖೆಯು ಕೋರಿದ್ದು, ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೂ ಸಹ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ರೀ ಕುಮಾರ ನಾಯಕ್ ಅವರು ತಿಳಿಸಿದರು.

ಆಸನ ವ್ಯವಸ್ಥೆ: ಈ ಬಾರಿ ಎಲ್ಲ ಪರೀಕ್ಷಾರ್ಥಿಗಳಿಗೆ ಆಸನ ವ್ಯವಸ್ಥೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತು ಬರೆಯುವಂತಹ ಸಂದರ್ಭ ಎದುರಾದರೆ ಆಯಾ ಬಿಇಓಗಳನ್ನೇ ಹೊಣೆಗಾರರನ್ನಾಗಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಅಂಗವಿಕಲ ಪರೀಕ್ಷಾರ್ಥಿಗಳು: ಈ ಬಾರಿ 292ಅಂಧ ವಿದ್ಯಾರ್ಥಿಗಳು, 534 ಕಿವುಡ ಮತ್ತು ಮೂಗ ವಿದ್ಯಾರ್ಥಿಗಳು, 260 ಶ್ರವಣದೋಷವಿರುವ ವಿದ್ಯಾರ್ಥಿಗಳು, 1979 ದೈಹಿಕ ಅಂಗವಿಕಲ ವಿದ್ಯಾರ್ಥಿಗಳು ಹಾಗೂ 206 ಮಂದಿ ಡಿಸ್‌ಲೆಕ್ಸಿಯಾ ಅಥವಾ ಸ್ಪಾಸ್ಟಿಕ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಪ್ರಥಮ ಬಾರಿಗೆ ಡಿಸ್‌ಲೆಕ್ಸಿಯಾ/ ಸ್ಪಾಸ್ಟಿಕ್ಸ್ ವಿದ್ಯಾರ್ಥಿಗಳು ಸರಳ ಕ್ಯಾಲ್ಕುಲೇಟರ್‌ಗಳನ್ನು ಬಳಸಲು ಈ ಬಾರಿ ಅನುಮತಿ ನೀಡಲಾಗಿದೆ. ಜೊತೆಗೆ ಪೋಷಕರ ವೆಚ್ಚದಲ್ಲಿ ಪ್ರಶ್ನೋತ್ತರ ಪತ್ರಿಕೆ ಓದಲು ಒಬ್ಬ ಸಹಾಯಕರನ್ನು ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದರು.

ಸಹಾಯವಾಣಿ ದೂರವಾಣಿ ಸಂಖ್ಯೆಗಳು:
ಭಾರತಿ ಮತ್ತು ಪಾರ್ವತಮ್ಮ, ಆಪ್ತ ಸಹಾಯಕರು- 080-23349434,, ಶೇಷಾಚಲ ಪಂಡಿತ್, ಆಪ್ತ ಸಹಾಯಕರು- 080-23445579, ಗೋವಿಂದೇಗೌಡ, ಹಿರಿಯ ಸಹಾಯಕ ನಿರ್ದೇಶಕರು-080-23349088, ಟಿ.ಟಿ. ಗಿರಿಯಪ್ಪ, ಸಹಾಯಕ ನಿರ್ದೇಶಕರು- 080- 23561271, ರಾಜಲಕ್ಷ್ಮಿ, ಹಿರಿಯ ಸಹಾಯಕ ನಿರ್ದೇಶಕರು- 98457 72455, ರತ್ನಮ್ಮ, ಹಿರಿಯ ಸಹಾಯಕ ನಿರ್ದೇಶಕರು- 9886335932, ಉಷಾ ಎಂ.ಡಿ., ಹಿರಿಯ ಸಹಾಯಕ ನಿರ್ದೇಶಕರು- 98453 50939, ಸೋಮೇಗೌಡ, ಸಹಾಯಕ ನಿರ್ದೇಶಕರು- 94497 21489.

ಮೌಲ್ಯಮಾಪನ: ಮೌಲ್ಯಮಾಪನಕ್ಕೆ ಸುಮಾರು 40,000 ಪ್ರೌಢಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗಿದ್ದು, 200 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+