ಯೋಗೀಶ್ವರ್ ವಿದ್ಯುಕ್ತವಾಗಿ ಬಿಜೆಪಿಗೆ ಸೇರ್ಪಡೆ
ಬೆಂಗಳೂರು, ಮಾ.30: ಕಾಂಗ್ರೆಸ್ ನಲ್ಲಿನ ನಾಯಕತ್ವದ ಕೊರತೆ, ಗುಂಪುಗಾರಿಕೆಯಿಂದ ಬೇಸತ್ತು ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೀಶ್ವರ್ ಪಕ್ಷ ತೊರೆಯುತ್ತಿರುವುದಾಗಿ ತಿಳಿಸಿದ್ದು, ಸೋಮವಾರ (ಮಾ.30) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹುಬ್ಬಳ್ಳಿಯಲ್ಲಿರುವ ವಿಧಾನಸಭೆ ಸ್ಪೀಕರ್ ಜಗದೀಶ ಶೆಟ್ಟರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ಅವರಿಗೆ ಸಮರ್ಪಿಸಲಿದ್ದಾರೆ.
ರಾಜೀನಾಮೆ ಸಲ್ಲಿಸಿದ ನಂತರ ವಿದ್ಯುಕ್ತವಾಗಿ ಯೋಗೀಶ್ವರ್ ಬಿಜೆಪಿಗೆ ಸೇರಲಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅವರು ಏ.2ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯೋಗೀಶ್ವರ್, ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ. ಗುಂಪು ಗಾರಿಕೆಯಿಂದ ಪಕ್ಷದೊಳಗೆಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ. ಆದ ಕಾರಣ ತಾವು ಪಕ್ಷ ತೊರೆಯಲು ನಿರ್ಧರಿಸಿದ್ದೇನೆ ಎಂದರು. ಬಿಜೆಪಿ ಸರಕಾರ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು, ಹಾಗಾಗಿ ಆ ಪಕ್ಷ ಸೇರುತ್ತಿದ್ದೇನೆ. ಬಿಜೆಪಿ ನಾಯಕರು ಸೂಚನೆನೀಡಿದರೆ, ಬೆಂಗಳೂರುಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಕಾಂಗ್ರೆಸ್ ಪಟ್ಟಿಯಲ್ಲಿ ಷರೀಫ್, ಬಂ, ಧರಂ, ಖರ್ಗೆ












Click it and Unblock the Notifications