ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

By Staff
|
Google Oneindia Kannada News

ಬೆಳಗಾವಿ, ಮಾ.30: ಪದವಿ ವಿದ್ಯಾರ್ಥಿಗಳ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಇದೇ ಮಾರ್ಚ್ 30 ಹಾಗೂ 31ರಂದು ಬೆಳಗಾವಿಯಲ್ಲಿ ನಡೆಯಲಿದ್ದು, ರಾಜ್ಯದ 6 ವಿಶ್ವವಿದ್ಯಾನಿಲಯಗಳ 96 ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸ್ಥಳೀಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ಸಹಯೋಗದಲ್ಲಿ ಈ ವಿಜ್ಞಾನ ವಸ್ತು ಪ್ರದರ್ಶನವನ್ನು ಏರ್ಪಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಸಂಚಾಲಕರಾದ ಪ್ರೊ. ಎಸ್.ವ್ಹಿ. ಸಂಕನೂರ ಅವರು ಈಗಾಗಲೇ ಬೆಂಗಳೂರು, ಗುಲಬರ್ಗಾ, ಕರ್ನಾಟಕ ಕುವೆಂಪು ಮೈಸೂರು ಹಾಗೂ ಮಂಗಳೂರ ವಿಶ್ವವಿದ್ಯಾನಿಲಯಗಳಲ್ಲಿ ವಲಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದ ಈ 6 ವಿಶ್ವವಿದ್ಯಾನಿಲಯದ 48 ತಂಡದ ವಿದ್ಯಾರ್ಥಿಗಳು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆಂದು ತಿಳಿಸಿದರು.

'ಭೂಗ್ರಹವನ್ನು ಸಂರಕ್ಷಿಸಿ' ಎಂಬ ಮುಖ್ಯ ವಿಷಯದ ಈ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಜಾಗತಿಕ ತಾಪ ಏರಿಕೆಯ ಪರಿಣಾಮಗಳು, ಪರ್ಯಾಯ ವಸ್ತುಗಳು, ಇ-ತ್ಯಾಜ್ಯ, ಆಹಾರ ಸಂರಕ್ಷಣೆ, ಪರಿಸರಸ್ನೇಹಿ ನೈಸರ್ಗಿಕ ಸಂಪನ್ಮೂಲಗಳ ಬಳಕೆ, ಉಪಗ್ರಹಗಳ ಅನ್ವಯಿಕತೆ, ಜೀವದ ಉಗಮ ಮತ್ತು ವಿಕಾಸ ಹಾಗೂ ನ್ಯಾನೋ ತಂತ್ರಜ್ಞಾನದ ಅನ್ವಯಿಕತೆ ವಿಷಯದ ಕುರಿತು ಮಾದರಿಗಳನ್ನು ಪ್ರದರ್ಶಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜಾ ಲಖಮಗೌಡ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್.ಎಸ್. ತೆಂಗಿನಕಾಯಿ ಹಾಗೂ ಪದವಿಪೂರ್ವ ಮಹಾವಿದ್ಯಾನಿಲಯದ ಪ್ರಾಚಾರ್ಯರಾದ ಸಿ.ಎಸ್. ನಾಯಕ ಉಪಸ್ಥಿತರಿದ್ದರು. ಈ ವಸ್ತು ಪ್ರದರ್ಶನವು ಮಾರ್ಚ್ 30 ರಂದು ಮಧ್ಯಾಹ್ನ 3 ರಿಂದ ಹಾಗೂ ಮಾರ್ಚ್ 31 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರಿಗೆ ಮುಕ್ತವಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಸಂಘಟಿಕರು ಕೋರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X