ಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ

Mallikarjun kharge
ಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಮೇಲೆ ಅಪಾರ ವಿಶ್ವಾಸವಿಟ್ಟು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾದ ನಾನು, ಹೈಕಮಾಂಡ್ ನಿರ್ಧಾರಕ್ಕೆ ತಲೆಬಾಗಿ ಕಣಕ್ಕೆ ಇಳಿದಿರುವೆ. ಶಿಸ್ತಿನ ಪಕ್ಷದ ಶಿಸ್ತಿನ ಸಿಪಾಯಿ ಆಗಿರುವ ನನಗೆ, ಲೋಕಸಭೆ ಚುನಾವಣೆಯಲ್ಲಿ ಜನರು ನನ್ನನ್ನು ಕೈಬಿಡುವುದಿಲ್ಲ ಎನ್ನುವ ನಂಬಿಕೆ ಇದೆ ಎಂದರು.

ಒಂಬತ್ತು ಸಲ ಶಾಸಕನಾಗಿ ಆಯ್ಕೆ ಮಾಡಿರುವ ಜನರು ಲೋಕಸಭೆ ಚುನಾವಣೆಯಲ್ಲಿ ಸಂಸದನನ್ನಾಗಿ ಆಯ್ಕೆ ಮಾಡಲಿದ್ದಾರೆ ಎಂದು ಹೇಳಿದರು. ಖರ್ಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಪೈಲ್ವಾನ್ ಎಂದೇ ಹೆಸರುವಾಸಿಯಾಗಿರುವ ಸಚಿವ ರೇವೂ ನಾಯಕ್ ಬೆಳಮಗಿ ಅಖಾಡದಲ್ಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ತೀವ್ರ ಕುತೂಹಲ ಕೆರಳಿಸಿದ ಕಾಂಗ್ರೆಸ್ ಪಟ್ಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+