ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ

By Staff
|
Google Oneindia Kannada News

Pro-Kannada Organisations to Enter Election Fray
ಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.

ಎಲ್ಲಾ ರಾಷ್ಟ್ರೀಯ ಪಕ್ಷಗಳು ಹಾಗೂ ಈವರೆಗೂ ಆರಿಸಿ ಬ೦ದ ಸಂಸದರು ಕನ್ನಡ ಭಾಷೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು, ನಾಡಿನ ಕವಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಿನಿಮಾ ನಟರ ಮನೆಗೆ ಭೇಟಿ ನೀಡಿ ಮತ ನೀಡುವಂತೆ ಮನವಿ ಮಾಡುವುದಾಗಿ ವಾಟಾಳ್ ಹೇಳಿದ್ದಾರೆ. ರಾಜ್ಯಾದ್ಯಂತ ಒಟ್ಟು 6 ಕಡೆ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳನ್ನು ನಿಲ್ಲಿಸಬೇಕೆಂದು ನಿರ್ಧರಿಸಿದ್ದೇವೆ.

ಬೆ೦ಗಳೂರು ಸೆಂಟ್ರಲ್ ಕ್ಷೇತ್ರದಿಂದ ಕನ್ನಡ ವೇದಿಕೆಯ ಪ್ರಭಾಕರ ರೆಡ್ಡಿ, ಬೆಂಗಳೂರು ಗ್ರಾಮಾಂತರದಿ೦ದ ಕರವೇಯ ಇನ್ನೊಂದು ಬಣದ ಅಧ್ಯಕ್ಷ ಶಿವರಾಮೇಗೌಡ ಸ್ಪರ್ಧಿಸಲಿದ್ದಾರೆ. ಚಾಮರಾಜನಗರ, ಬೆಂಗಳೂರು ಉತ್ತರ ಮತ್ತು ಬೆಳಗಾವಿಯಲ್ಲಿ ಮುಂದಿನ ದಿನದಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ವಾಟಾಳ್ ತಿಳಿಸಿದರು.

ಈ ಸಂದರ್ಭದಲ್ಲಿ ಸ್ವಾಭಿಮಾನಿ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್, ಸಮಾಜವಾದಿ ಪಕ್ಷದ ಮಹಿಳಾ ಘಟಕದ ನಾಯಕಿ ಬಿ ಟಿ ಲಲಿತಾನಾಯಕ್, ಕರವೇ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು. ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ಬಿಜೆಪಿಯ ಅನಂತ್ ಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿ ಕ್ಯಾಪ್ಟನ್ ಗೋಪಿನಾಥ್ ವಿರುದ್ದ ವಾಟಾಳ್ ನಾಗರಾಜ್ ಸೆಣಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ
ಲೋಕಸಭೆ ಚುನಾವಣೆ 2009 ತಾಜಾ ಸುದ್ದಿಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X