ಹಿರಿಯ ಗಾಂಧಿವಾದಿ ಹಾರ್ನಹಳ್ಳಿ ರಾಮಸ್ವಾಮಿ ನಿಧನ

ದಿನಪತ್ರಿಕೆ ಸಂಯುಕ್ತ ಕರ್ನಾಟಕವನ್ನು ಪ್ರಕಟಿಸುತ್ತಿರುವ ಲೋಕ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರು ಹಾಸನದಲ್ಲಿರುವ ಮಲನಾಡ್ ಶಿಕ್ಷಣ ಸಂಸ್ಥೆಯಲ್ಲಿಯೂ ಸೇವೆ ಸಲ್ಲಿಸಿದ್ದರು. ಹಾರ್ನಹಳ್ಳಿ ರಾಮಸ್ವಾಮಿಯವರು ವೀರಪ್ಪ ಮೋಯ್ಲಿ ಸರಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿಯೂ ದುಡಿದಿದ್ದರು. ಎಸ್ಎಮ್ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ರಾಮಸ್ವಾಮಿಯವರು ನ್ಯಾಯವಾದಿ ಅಶೋಕ್ ಹಾರ್ನಹಳ್ಳಿ ಸೇರಿದಂತೆ ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಗಾಂಧಿವಾದಿ ಹಾರ್ನಹಳ್ಳಿ ರಾಮಸ್ವಾಮಿಯವರ ನಿಧನಕ್ಕೆ ತೀವ್ರ ಸಂಪಾತ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರೂ ರಾಮಸ್ವಾಮಿ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
(ಏಜೆನ್ಸೀಸ್)












Click it and Unblock the Notifications