ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ 35 ಸಾವು

By Staff
|
Google Oneindia Kannada News

ಇಸ್ಲಾಮಾಬಾದ್, ಏ. 5 : ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ಸಮಯದಲ್ಲಿ ಆತ್ಮಾಹುತಿ ದಾಳಿ ನಡೆದುಸುಮಾರು 35 ಜನರು ಮೃತಪಟ್ಟಿದ್ದು, 200 ಹೆಚ್ಚೂ ಮಂದಿ ಗಾಯಗೊಂಡಿರುವ ದಾರುಣ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ಶಿಯಾ ಸಮುದಾಯ ಮುಸ್ಲಿಮರು ವರ್ಷಕ್ಕೊಮ್ಮೆ ಧಾರ್ಮಿಕ ಕಾರ್ಯಕ್ರಮವನ್ನು ಪಂಜಾಬ್ ನ ಟೆಕ್ವಾಲ್ ಪ್ರದೇಶದ ಸಾರಾ ಪಾರ್ಕ್ ಬಳಿ ಇರುವ ಮಸೀದಿ ಬಳಿ ಏರ್ಪಡಿಸುತ್ತಾರೆ. ಸುಮಾರು 2 ಸಾವಿರ ಮಂದಿ ಸೇರಿದ್ದ ಕಾರ್ಯಕ್ರಮದ ಮೇಲೆ ಆಹ್ಮಾಹುತಿ ದಾಳಿ ನಡೆದಿದೆ. ಘಟನೆಯಲ್ಲಿ 35 ಮಂದಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಳಿಕೋರರರು ಮಸೀದಿ ಒಳಗೆ ಬಂದು ದಾಳಿ ನಡೆಸಿದ್ದಾರೆ ಎಂದು ಪಾಕಿಸ್ತಾನದ ಪೊಲೀಸ್ ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X