ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌಹಾತಿಯಲ್ಲಿ ಕಾರ್ ಬಾಂಬ್ ಸ್ಫೋಟ, 5 ಸಾವು

By Staff
|
Google Oneindia Kannada News

ಗೌಹಾತಿ, ಏ. 6 : ನಗರದ ಮಲಿಗಾಂವ್ ನ ಜಾಲಕ್ ಬರಿ ಪೊಲೀಸ್ ಠಾಣೆಯ ಬಳಿ ಶಕ್ತಿಯುತ ಕಾರ್ ಬಾಂಬ್ ಸ್ಫೋಟಗೊಂಡಿದ್ದರಿಂದ 4 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ದಾರುಣ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಸ್ಫೋಟದ ತೀವ್ರತೆಗೆ ಪೊಲೀಸ್ ಠಾಣೆಯ ಸುತ್ತಮುತ್ತಲಿದ್ದ ಕೆಲ ಕಟ್ಟಡಗಳು ಜಖಂಗೊಂಡಿದ್ದು, ಹಲವು ವಾಹನಗಳು ಸುಟ್ಟು ಕರಕಲಾಗಿವೆ. ಉಲ್ಫಾ ಸಂಸ್ಥಾಪನಾ ದಿನಕ್ಕೂ ಮುನ್ನಾ ದಿನ ಈ ಸ್ಫೋಟ ನಡೆದಿದೆ.

ಲೋಕಸಭೆ ಚುನಾವಣೆ ಮುನ್ನ ಘಟನೆ ಸಂಭವಿಸಿದ್ದು, ಉಲ್ಫಾ ಬಂಡುಕೋರರು ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳವನ್ನು ಪೊಲೀಸರು ಸುತ್ತವರಿದಿದ್ದು, ತಪಾಸಣೆ ಆರಂಭಿಸಿದ್ದಾರೆ. ಮಂಗಳವಾರ ಗೌಹಾತಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡುವ ಕಾರ್ಯಕ್ರಮವಿದ್ದು, ಈ ಘಟನೆ ತೀವ್ರ ಆತಂಕ ಮೂಡಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

(ಏಜನ್ಸೀಸ್)
ಅಸ್ಸಾಂನಲ್ಲಿ ಪ್ರಬಲ ಬಾಂಬ್ ಸ್ಫೋಟ, 1 ಸಾವು
ಆಸ್ಸಾಂ ಬಾಂಬ್ ಸ್ಫೋಟದಲ್ಲಿ ಸತ್ತವರು 32

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X