ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ

By Super
|
Google Oneindia Kannada News

Sonia Gandhi to file nomination on Apr 6
ರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಇಂದಿರಾಗಾಂಧಿ ಅವರು ಮೊದಲ ಬಾರಿಗೆ 1967ರಲ್ಲಿ ರಾಯ್ ಬರೇಲಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಇದಕ್ಕೂ ಮೊದಲು ಇಂದಿರಾ ಗಾಂಧಿ ಪತಿ ಫಿರೋಜ್ ಅವರ ಈ ಕ್ಷೇತ್ರದ ಸಂಸದರಾಗಿದ್ದರು.

2004 ರಲ್ಲಿ ಚುನಾವಣಾ ಅಖಾಡಕ್ಕೆ ಧುಮುಕಿದ ಸೋನಿಯಾ ಗಾಂಧಿ ರಾಯ್ ಬರೇಲಿ ಕ್ಷೇತ್ರದಿಂದ ಭಾರಿ ಅಂತರ ಪ್ರಚಂಡ ಬಹುಮತದಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು. ಇದೀಗ ಮತ್ತೆ ತಮ್ಮ ಅದೃಷ್ಟ ಪರೀಕ್ಷೆಗೆ ಒಡ್ಡಿರುವ ಸೋನಿಯಾ ಗಾಂಧಿ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರಕ್ಕೂ ಮುನ್ನ ತಮ್ಮ ಪುತ್ರ ಹಾಗೂ ಅಮೇಥಿ ಲೋಕಸಭೆ ಕ್ಷೇತ್ರ ಹುರಿಯಾಳು ರಾಹುಲ್ ಗಾಂಧಿ ಅವರೊಂದಿಗೆ ಮರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಇಂದು ಉತ್ತರ ಪ್ರದೇಶದ ಮೂರು ಪ್ರದೇಶಗಳಲ್ಲಿ ಸೋನಿಯಾ ಗಾಂಧಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ) ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

English summary
Lok Sabha election 2009
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X