ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಮಾಡಲು ಹೇಸದು

By Staff
|
Google Oneindia Kannada News

Congress can join hands with anyone for power
ಬೆಳಗಾವಿ, ಏ. 7 : ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟು ಇರಲು ಸಾಧ್ಯವಿಲ್ಲ. ಅಧಿಕಾರ ಪಡೆಯಲು ಯಾವ ಮಟ್ಟಕ್ಕಾದರೂ ಇಳಿಯಲು ಅದು ಹೇಸದು. ಇವರ ಸಹವಾಸ ಬೇಡ ಎಂದು ದೂರ ಸರಿದಿರುವ ಎಡಪಕ್ಷಗಳೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ನಡೆಸಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ಏರ್ಪಡಿಸಲಾಗಿರುವ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷ ಯಾರೊಂದಿಗಾದರೂ ಮೈತ್ರಿ ಮಾಡಿಕೊಳ್ಳಲು ಸಿದ್ದವಿದೆ. ನಾಗರಿಕ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಯಪಿಎ ಸರ್ಕಾರ ತಿರಸ್ಕರಿಸಿರುವ ಎಡಪಕ್ಷಗಳೊಂದಿಗೆ ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳುವ ವಿಷಯ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷದ ಕ್ರಮ ನಾಚಿಕೆಗೇಡು ಎಂದು ಅವರು ಲೇವಡಿ ಮಾಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ದೇಶದ ಹಿತಕ್ಕಾಗಿ ಬಡಿದಾಡುವ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದ ಅಡ್ವಾಣಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕೈಬಿಡಬೇಡಿ ಎಂದು ಮನವಿ ಮಾಡಿಕೊಂಡರು. ಕಾಂಗ್ರೆಸ್ ಆಡಳಿತವಿರುವ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಜನರು ಪರಿಸ್ಥಿತಿ ಯಾವ ಮಟ್ಟದಲ್ಲಿದೆ. ರೈತರ ಆತ್ಮಹತ್ಯೆ ನಿರಂತರವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಿಂದ ಕಾಂಗ್ರೆಸ್ ಪಕ್ಷ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು. ಕರ್ನಾಟಕದ ಬಿಜೆಪಿ ಸರ್ಕಾರದ ಅಡಳಿತ ಕ್ರಮವನ್ನು ಮುಕ್ತವಾಗಿ ಶ್ಲಾಘಿಸಿದ ಅಡ್ವಾಣಿ, ಯಡಿಯೂರಪ್ಪ ನೇತೃತ್ವದ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X