ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 6 ರಂದು ಕನ್ನಡ ವಿಜ್ಞಾನ ಲೇಖಕರ ತರಬೇತಿ

By Staff
|
Google Oneindia Kannada News

ಗುಲಬರ್ಗಾ, ಏ. 9 : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು, ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆಯ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದೆ.

ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ಗ್ರಾಮೀಣ ವಿಭಾಗದ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ಚಿತ್ರ ನಿರೂಪಕರು, ರೇಡಿಯೋ ಭಾಷಣಕಾರರು ಮತ್ತಿತರ ಆಸಕ್ತರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರವು 2009ರ ಮೇ 6 ರಿಂದ 10 ರವರೆಗೆ ಮಂಡ್ಯ ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಜರುಗುವುದು. ನುರಿತ ವಿಜ್ಞಾನ ಬರಹಗಾರರಿಂದ ಶಿಬಿರಾರ್ಥಿಗಳಿಗೆ ವಿಜ್ಞಾನ ಬರವಣಿಗೆ ಕುರಿತು ವಿವಿಧ ಕೌಶಲ್ಯ, ಆಕರ, ಶಬ್ದ ಬಳಕೆ, ಅನುವಾದ, ವಿಜ್ಞಾನ ಪತ್ರಿಕೋದ್ಯಮ ಮುಂತಾದ ಅಂಶಗಳಲ್ಲಿ ತರಬೇತಿ ನೀಡಲಾಗುವುದು.

ಶಿಬಿರಾರ್ಥಿಗಳಾಗಿ ಭಾಗವಹಿಸಲಿಚ್ಛಿಸುವವರು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು. ಶಿಬಿರದಲ್ಲಿ ಭಾಗವಹಿಸಲು ವ್ಯಕ್ತಿ ವಿವರದೊಂದಿಗೆ ಹಾಗೂ ತಮ್ಮ ಸ್ವರಚಿತ ಒಂದು ಲೇಖನವನ್ನು ಅರ್ಜಿ ಜೊತೆಯಲ್ಲಿ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ನಂ 24/2 ಮತ್ತು 24/3, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-560070,

ಇ-ಮೇಲ್ : [email protected] ಈ ವಿಳಾಸಕ್ಕೆ ತಲುಪುವಂತೆ ದಿನಾಂಕ : 18-04-2009 ರೊಳಗೆ ಸಲ್ಲಿಸಬೇಕು. ಕರಾವಿಪ ಸಂಘಟಿಸಿದ ಲೇಖಕರ ಶಿಬಿರಗಳಲ್ಲಿ ಈಗಾಗಲೇ ಭಾಗವಹಿಸುವವರು ಅರ್ಜಿ ಸಲ್ಲಿಸುವಂತಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪರಿಷತ್ತು ಉಚಿತ ಊಟ, ವಾಸ್ತವ್ಯ ಮತ್ತು ಪ್ರಯಾಣ ಭತ್ಯೆ ಸೌಲಭ್ಯವನ್ನು ಒದಗಿಸುವುದು.

ಹೆಚ್ಚಿನ ಮಾಹಿತಿಗೆ ಪರಿಷತ್ತಿನ ಕಚೇರಿ 080-26718939/26718959 ಅಥವಾ ಪ್ರೊ. ಸಿ.ಡಿ. ಪಾಟೀಲ, ಗೌರವ ಕಾರ್ಯದರ್ಶಿ ಮೊ. 9448427585, ಪ್ರೊ|| ಕೆ.ಎಸ್. ನಟರಾಜ್, ಗೌರವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊ. 9449655297 ಇವರುಗಳನ್ನು ಸಂಪರ್ಕಿಸಬಹುದು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X