ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ

By Staff
|
Google Oneindia Kannada News

Kharge not to resign his post says Deshpande
ಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಸದ್ಯಕ್ಕೆ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷದ ಸ್ಥಾನದಲ್ಲಿ ಕೂರಿಸುವ ಯೋಚನೆ ಪಕ್ಷದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳ ತಾಲ್ಲೂಕಿನ ಬಸಾಪುರ ಗ್ರಾಮದಲ್ಲಿ ಚುನಾವಣೆ ಪ್ರಚಾರ ನಡೆಸಿದ ನಂತರ ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇಶಪಾಂಡೆ, ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಹಿತಿ ನನಗೆ ಗೊತ್ತಿಲ್ಲ. ಗುಲ್ಬರ್ಗಾ ಕ್ಷೇತ್ರದಿಂದ ಅಖಾಡಕ್ಕೆ ಇಳಿದಿರುವ ಖರ್ಗೆ ಅವರ ಗೆಲುವು ಖಚಿತ. ಅವರು ದೆಹಲಿಗೆ ತೆರಳಲಿದ್ದಾರೆ. ಅಲ್ಲದೇ ಕೇಂದ್ರದಲ್ಲಿ ಯುಪಿಎ ಸರ್ಕಾರ ಇನ್ನೊಂದು ಬಾರಿ ಸರ್ಕಾರ ರಚಿಸುವುದು ಸೂರ್ಯನಷ್ಟೆ ಸತ್ಯ. ಕೇಂದ್ರ ಸರ್ಕಾರದಲ್ಲಿ ಖರ್ಗೆ ಅವರಿಗೆ ಸೂಕ್ತ ಸ್ಥಾನಮಾನ ನೀಡಿದ ನಂತರ ರಾಜೀನಾಮೆ ನೀಡುವ ಪ್ರಕಿಕ್ರಿಯೆಗೆ ಚಾಲನೆ ನೀಡಲಾಗುವುದು. ಒಟ್ಟಿನಲ್ಲಿ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ದೇಶಪಾಂಡೆ ಹೇಳಿದರು.

ಸಿದ್ದರಾಮಯ್ಯ ಅವರ ಮೂರು ವರ್ಷಗಳ ವನವಾಸ ಮುಗಿಯಿತು ಎನ್ನುವಾಗಲೇ ದೇಶಪಾಂಡೆ ಹಾಕಿರುವ ಬಾಂಬ್ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವದಂತೂ ಸುಳ್ಳಲ್ಲ. ಲೋಕಸಭೆ ಚುನಾವಣೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಜವಾಬ್ದಾರಿ ಸಿದ್ದರಾಮಯ್ಯ ಅವರ ಹೆಗಲ ಮೇಲಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದರೆ ಮಾತ್ರ ಸಿದ್ದುಗೆ ಪ್ರತಿಪಕ್ಷದ ಸ್ಥಾನ ಎನ್ನುವ ಮಾತುಗಳು ಕೇಳಿಬರುತ್ತಿವೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
ಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್ ?

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X