ಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ

ಮುಂದಿನ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ. ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿಸುವ ಯಾವ ಕಾರ್ಯವನ್ನು ಮಾಡುವುದಿಲ್ಲ ಎಂದು ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ವರುಣ್ ಪರ ವಕೀಲ ಪ್ರಶಾಂತ್ ಸಿಂಗ್ ಅಟಾಳ್ ತಿಳಿಸಿದ್ದಾರೆ. ಸುಪ್ರಿಂಕೋರ್ಟ್ ನೀಡಿರುವ ಸೂಚನೆ ಮೇರೆಗೆ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.
ಕಳೆದ ತಿಂಗಳು ಪಿಲಿಭಿತ್ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಯಾವತಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ವರುಣ್ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿ ದಾಖಲಿಸಿತ್ತು. ವರುಣ್ ಗಾಂಧಿ ಹೇಳಿಕೆ ಹಾಗೂ ಬಂಧನ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿತ್ತು.
(ದಟ್ಸ್ ಕನ್ನಡ ವಾರ್ತೆ)
ವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸು.ಕೋರ್ಟ್
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು











Click it and Unblock the Notifications