ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವೇಗೌಡರು ಜನತೆ ಕ್ಷಮೆ ಕೇಳಲಿ : ಸಿದ್ದು

By Staff
|
Google Oneindia Kannada News

Devegowda must asks sorry
ಅರಸೀಕೆರೆ, ಏ. 17 : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಭದ್ರವಾಗಿ ತಳವೂರಲು ದೇವೇಗೌಡ ಹಾಗೂ ಅವರ ಮಕ್ಕಳು ರಾಜಕೀಯ ಸ್ವಾರ್ಥವೇ ಕಾರಣ. ಈ ಹಿನ್ನೆಲೆಯಲ್ಲಿ ದೇವೇಗೌಡ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದರು.

ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಮಕ್ಕಳ ಮೇಲಿರುವ ಧೃತರಾಷ್ಟ್ರ ಪ್ರೀತಿಯಿಂದಾಗಿ ಇಂದು ರಾಜ್ಯ ಅಪಾಯದ ಮಟ್ಟಕ್ಕೆ ಬಂದು ತಲುಪಿದೆ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದ 10 ತಿಂಗಳು ಆಗಿದೆ. ಅವರ ಸಾಧನೆ ಏನು ಎಂದರೆ ಅಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರಿಗೆ ಅಧಿಕಾರದ ಅಸೆ-ಅಮಿಷಗಳನ್ನು ಒಡ್ಡಿ ಪಕ್ಷಕ್ಕೆ ಸೆಳೆದುಕೊಂಡಿರುವುದು ಬಹುದೊಡ್ಡ ಸಾಧನೆ ಎಂದು ಟೀಕಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವೇ ಇಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಯಡಿಯೂರಪ್ಪ ಅವರ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು. ಬಿಜೆಪಿ ನಡೆಸಿದ ಅಪರೇಷನ್ ಕಮಲ ಅವರಿಗೆ ಮುಳುವಾಗಲಿದೆ. ಅವರ ಖುರ್ಚಿ ಅಲುಗಾಡುತ್ತಿದೆ. ಈಗಾಗಲೇ ಬಳ್ಳಾರಿ ಸಚಿವರಿಗೆ ಯಡಿಯೂರಪ್ಪ ಬೇಡವಾಗಿದ್ದಾರೆ. ಯಾವ ಸಂದರ್ಭದಲ್ಲಿ ಬೇಕಾದರೂ ಬಿಜೆಪಿ ಸರ್ಕಾರವನ್ನು ಅವರು ಬೀಳಸಬಹುದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X