ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಶ್ರೀಮಂತರ ಪಕ್ಷ : ರಾಹುಲ್ ಗಾಂಧಿ

By Staff
|
Google Oneindia Kannada News

ಬೀದರ್, ಗುಲ್ಬರ್ಗಾ, ಏ. 17 : ಭಾರತೀಯ ಜನತಾ ಪಕ್ಷ ಉಳ್ಳವರ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಭಾಜಪ ಕೇಂದ್ರ ಸರ್ಕಾರದ ಅನುದಾನ ಪಡೆದುಕೊಂಡು ಜನಪರ ಯೋಜನೆಗಳನ್ನು ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಆರೋಪಿಸಿದರು.

ಬೀದರ್ ಹಾಗೂ ಗುಲ್ಬರ್ಗಾ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಧರಂಸಿಂಗ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪರ ಪ್ರಚಾರ ಸಭೆ ನಡೆಸಿದ ಅವರು, ಬಿಜೆಪಿ ಕಾರ್ಯ ವೈಖರಿ ವಿರುದ್ದ ವಾಗ್ದಾಳಿ ನಡೆಸಿದರು. ಸಾವಿರಾರು ಕೋಟಿ ರುಪಾಯಿಗಳನ್ನು ಪಡೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರ, ರಾಜ್ಯ ಅಭಿವೃದ್ಧಿ ಬಳಸದಿರುವುದು ದುರದೃಷ್ಟಕರ ಸಂಗತಿ ಎಂದು ದೂರಿದ ಅವರು, ಕಾಂಗ್ರೆಸ್ ಆಡಳಿತದಲ್ಲಿರುವ ಎಲ್ಲ ರಾಜ್ಯಗಳಲ್ಲಿ ಕೇಂದ್ರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅನೇಕ ಜನಪರ ಯೋಜನೆಗಳನ್ನು ರೂಪಿಸಿವೆ ಎಂದು ಹೇಳಿದರು.

ಪಕ್ಕದ ಆಂಧ್ರಪ್ರದೇಶದಲ್ಲಿ ಅಲ್ಲಿನ ಸರ್ಕಾರ ಕೇಂದ್ರದ ಅನುದಾನ ಪಡೆದುಕೊಂಡು ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಆದರೆ, ಇಲ್ಲಿರುವ ಬಿಜೆಪಿ ಸರ್ಕಾರಕ್ಕೆ ಏನಾಗಿದೆ ಎಂದು ಪ್ರಶ್ನಿಸಿದ ರಾಹುಲ್, ಬಿಜೆಪಿ ಮುಖಂಡರಿಗೆ ಅಭಿವೃದ್ಧಿ ಬೇಕಿಲ್ಲ, ಶಾಂತಿ ಬೇಕಿಲ್ಲ ಎಂದು ಕಿಚಾಯಿಸಿದರು. ಬಿಜೆಪಿ ಶ್ರೀಮಂತರ ಪಕ್ಷ ಎಂದು ಲೇವಡಿ ಮಾಡಿದ ಅವರು, ಬಡವರನ್ನು ಕೈಬಿಟ್ಟ ಬಿಜೆಪಿ ಬಹುದೂರ ಸಾಗಿದೆ. ಆದ್ದರಿಂದ ಮತದಾರರೇ ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಿ ಎಂದು ಮನವಿ ಮಾಡಿಕೊಂಡರು.

ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಯೋಜನೆ ಮತ್ತು ಸೆಕ್ಷನ್ 371 ಜಾರಿಗೆ ತರಲು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಆಧ್ಯತೆ ನೀಡಲಿದೆ ಎಂದು ಭರವಸೆ ನೀಡಿದ ರಾಹುಲ್ ಗಾಂಧಿ, ಈ ಭಾಗದ ಅಭಿವೃದ್ಧಿಗೆ ಸಕಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X