ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ

By Lalu Yadav holds Congress responsible for Babri Demolition
|
Google Oneindia Kannada News

Lalu Yadav holds Congress responsible for Babri Demolition
ಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ.

ಬಿಹಾರ ದರ್ಭಾಂಗ ಜಿಲ್ಲೆಯಲ್ಲಿ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, 1992 ರಲ್ಲಿ ಬಾಬ್ರಿ ಮಸೀದಿ ಕಟ್ಟಡ ಕೆಡವಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಆದರೂ ಮಸೀದಿಯನ್ನು ಆಗಲಿಲ್ಲ ಎದು ಹೇಳಿದ್ದಾರೆ. ಲಾಲು ಅವರ ಆರೋಪಕ್ಕೆ ಪ್ರತಿಕ್ರಿಯಿ ನೀಡಿರುವ ಕಾಂಗ್ರೆಸ್ ಸ ಮುಖಂಡ, ಕೇಂದ್ರ ಸಚಿವ ವಯಲಾರ್ ರವಿ ಅವರು ಲಾಲು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ತಿಳಿದಿಲ್ಲ. ಈ ಶೈಲಿಯ ಹೇಳಿಕೆಯನ್ನು ಅವರಿಂದ ನಿರೀಕ್ಷಿಸರಿಲಿಲ್ಲ. ಲಾಲು ಮತ್ತು ಇತರರು ಕಾಂಗ್ರೆಸ್ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಲಾಲು ಪ್ರಸಾದ್ ಯಾದವ್ ಕೇಂದ್ರ ಸಚಿವರಾಗಿದ್ದರೂ ಕಾಂಗ್ರೆಸ್ ಮೇಲಿನ ವಾಗ್ದಾಳಿ ನಡೆಸುತ್ತಿರುವುದನ್ನು ಬಿಡುತ್ತಿಲ್ಲ. ಇತ್ತೀಚೆಗೆ ಅವರು ಪ್ರಚಾದನಕಾರಿ ಹೇಳಿಕೆ ನೀಡಿರುವ ವರುಣ್ ಗಾಂಧಿ ಮೇಲೆ ರೋಲರ್ ಹತ್ತಿಸಬೇಕು ಎಂಬ ವಿವಾದದ ಹೇಳಿಕೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X