ಚುನಾವಣೆ ನಂತರ ಪ್ರತಿಪಕ್ಷ ನಾಯಕನ ಆಯ್ಕೆ

ಬೆಂಗಳೂರು, ಏ. 22 : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಚುನಾವಣೆ ನಂತರವೇ ಮಾಡಲಾಗುವುದು ಎಂದು ರಾಜ್ಯದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಮ್ ನಬಿ ಅಜಾದ್ ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕರಾದ ಖರ್ಗೆ, ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ ಅವರ ಗೆಲುವು ಖಚಿತ. ಹೀಗಾಗಿ ಅವರ ಸ್ಥಾನಕ್ಕೆ ಬೇರೊಬ್ಬರನ್ನು ಆಯ್ಕೆ ಮಾಡುವ ಕೆಲಸ ಚುನಾವಣೆ ನಂತರ ನಡೆಯಲಿದೆ ಎಂದು ವಿವರಿಸಿದರು.

ಶಾಸಕಾಗ ಪಕ್ಷದ ನಾಯಕನನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡುವುದಿಲ್ಲ. ಬದಲಿಗೆ ಶಾಸಕರೇ ಆಯ್ಕೆ ಮಾಡಿಕೊಳ್ಳುತ್ತಾರೆ. ಮೊದಲ ಹಂತದ ಚುನಾವಣೆ 17 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 10 ಕ್ಷೇತ್ರಗಳಲ್ಲಿ ಜಯ ನಿಶ್ಚಿತ ಎಂದು ವಿಶ್ವಾಸದಿಂದ ಹೇಳಿದರು. ಪ್ರಾದೇಶಿಕ ಪಕ್ಷಗಳು ದೇಶದ ಅಧಿಕಾರ ಚುಕ್ಕಾಣಿ ಹಿಡಿಯುವುದು ಸರಿಯಲ್ಲ. ಏಕೆಂದರೆ ಆ ಪಕ್ಷಗಳು ಪ್ರಾದೇಶಿಕ ಮನೋಭಾವ ಹೊಂದಿರುತ್ತವೆ. ಅಂತಹ ಪಕ್ಷಗಳಿಂದ ಸಮಗ್ರ ಅಭಿವೃದ್ಧಿ ಅಸಾಧ್ಯ ಎಂದು ಅಜಾದ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+