ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೆಡ್ಡಿಗಳನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹ

By Staff
|
Google Oneindia Kannada News

ಬೆಂಗಳೂರು, ಏ. 28 : ರಾಜ್ಯದ ಗಡಿ ಭಾಗದ ಅಕ್ರಮ ಗಣಿಗಾರಿಕೆಯಲ್ಲಿ ನಿರತವಾಗಿರುವ ಬಳ್ಳಾರಿ ಗಣಿ ಧಣಿಗಳಾದ ಸಚಿವತ್ರಯರನ್ನು ಸಂಪುಟದಿಂದ ತಕ್ಷಣವೇ ವಜಾಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷ ಕಾಗ್ರೆಸ್ ಪ್ರತಿಭಟನೆ ಆರಂಭಿಸಿದೆ.

ಪ್ರವಾಸೋದ್ಯಮ ಸಚಿವ ಜನಾರ್ದನರೆಡ್ಡಿ, ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿಯ ಎರಡು ಗಣಿ ಗುತ್ತಿಗೆಯನ್ನು ರದ್ದುಪಡಿಸುವಂತೆ ಕೇಂದ್ರ ಸರಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬೇಡಿಕೆ ಮುಂದಿಟ್ಟಿದೆ.

ನಗರದ ಬಸವೇಶ್ವರ ವೃತ್ತದ ಬಳಿ ಮಾಜಿ ಮೇಯರ್ ಗಳಾದ ಎಂ ರಾಮಚಂದ್ರಪ್ಪ, ಜೆ ಹುಚ್ಚಪ್ಪ, ಕೆಪಿಸಿಸಿ ವಕ್ತಾರ ಎಸ್ ಟಿ ಸೋಮಶೇಖರ್ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಸೇರಿದ್ದ ಪಕ್ಷದ ಕಾರ್ಯಕರ್ತರು ಬಳ್ಳಾರಿ ಸಚಿವರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾಗಿದ್ದು, ತಕ್ಷಣವೇ ಅವರಿಂದ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿದರು. ಸಚಿವರ ರಾಜೀನಾಮೆ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಮುಖ್ಯಮಂತ್ರ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರನಡೆಯಲಿ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಜಂಟಿ ಸರ್ವೆ ನಡೆಸಲು ಕೇಂದ್ರ ಸಿಎಂ ಆಗ್ರಹ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X