ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'

By Staff
|
Google Oneindia Kannada News

Yeddyurappa and his son
ಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ ರಾಘವೇಂದ್ರ ಕಣಕ್ಕಿಳಿದಿರುವುದು ಗೊತ್ತೇ ಇದೆ.

ಎರಡನೇ ಹಂತದ ಚುನಾವಣೆ 11 ಲೋಕಸಭೆ ಕ್ಷೇತ್ರಗಳಲ್ಲಿ ನಡೆಯುತ್ತಿದ್ದು ಕಣದಲ್ಲಿ ಒಟ್ಟು 156 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇವರಲ್ಲಿ ಒಟ್ಟು 93 ಅಭ್ಯರ್ಥಿಗಳು ಪಕ್ಷೇತರರು. ದಾವಣಗೆರೆ ಲೋಕಸಭೆ ಕ್ಷೇತ್ರದಿಂದ 22 ಮಂದಿ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಾಗಲಕೋಟೆಯಲ್ಲಿ 12 ಮಂದಿ ಪಕ್ಷೇತರರು ಸ್ಪರ್ಧಿಸಿದ್ದಾರೆ. ಪ್ರತಿಷ್ಠಿತ ಕ್ಷೇತ್ರವಾಗಿರುವ ಹಾಸನದಲ್ಲಿ ದೇವಗೌಡರೊಂದಿಗೆ 9 ಮಂದಿ ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
ಯಡಿಯೂರಪ್ಪ ಬಲಗೈ ಬೆರಳಿಗೆ ಇಂಕು ಯಾಕಪ್ಪ?

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X