ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ

By Staff
|
Google Oneindia Kannada News

SSLC results on May 1
ಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ ತಾಣದಲ್ಲಿ ಪ್ರಕಟಿಸಲಿದೆ. ಈ ಸಾಲಿನಲ್ಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 8.58 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಮೌಲ್ಯಮಾಪನ ಕಾರ್ಯ ಏ.19ಕ್ಕೆ ಅಂತ್ಯವಾಗಿತ್ತು.

ಶುಕ್ರವಾರ (ಮೇ.1) ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಫಲಿತಾಂಶದ ವಿವರಗಳನ್ನು ನೀಡಲಿದ್ದಾರೆ. ಮಧ್ಯಾಹ್ನ 12ರ ನಂತರ 3 ಗಂಟೆಯೊಳಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಇಲಾಖೆಯ ವೆಬ್ ಸೈಟಿನಲ್ಲಿ ಲಭ್ಯವಾಗಲಿದೆ.

(ದಟ್ಸ್ ಕನ್ನಡ ವಾರ್ತೆ)
ಮೈಸೂರಿನಲ್ಲಿ 43,457 ಎಸೆಸ್ಸೆಲ್ಸಿಪರೀಕ್ಷಾರ್ಥಿಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X