ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ

By Staff
|
Google Oneindia Kannada News

Karnatkaa SSLC 2009 results announce
ಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now available

ಉಡುಪಿ ಜಿಲ್ಲೆ ಶೇ.86ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದರೆ ಬೀದರ್ ಜಿಲ್ಲೆ ಶೇ.41ರಷ್ಟು ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ಶೇ.67ರಷ್ಟು ಬಾಲಕರು ಮತ್ತು ಶೇ.73ರಷ್ಟು ಬಾಲಕಿಯರು ತೇರ್ಗಡೆ ಹೊಂದಿದ್ದಾರೆ. ರಾಜ್ಯದ 35 ಶಾಲೆಗಳು ಶೂನ್ಯ ಫಲಿತಾಂಶವನ್ನು ಪಡೆದಿವೆ.

ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಕಳೆದ ಏ.19ರಂದು ಪೂರ್ಣಗೊಂಡಿತ್ತು. ಎಸ್ಸೆಸ್ಸೆಲ್ಸಿ ಫಲಿತಾಂಶಗಳು ದಟ್ಸ್ ಕನ್ನಡಲ್ಲಿ ಪ್ರಕಟವಾಗಿದೆ

(ದಟ್ಸ್ ಕನ್ನಡ ವಾರ್ತೆ)

ಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ

ಎಸ್ಸೆಸ್ಸೆಲ್ಸಿ ಅಂಕಪಟ್ಟಿ ದಟ್ಸ್ ಕನ್ನಡದಲ್ಲಿ ಪ್ರಕಟ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X