ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪುಹಣ ತರುತ್ತೇವೆ: ಕೇಂದ್ರ

By Staff
|
Google Oneindia Kannada News

Govt files affidavit in SC on black money issue
ನವದೆಹಲಿ, ಮೇ.2: ಸ್ವಿಸ್ ಬ್ಯಾಂಕ್ ನಲ್ಲಿರುವ ಭಾರತದ ಸಾವಿರಾರು ಕೋಟಿ ರುಗಳ ಕಪ್ಪು ಹಣವನ್ನು ಮರಳಿ ಭಾರತಕ್ಕೆ ತರಲು ಕ್ರಮ ಕೈಗೊಳ್ಳುವುದಾಗಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇಂದ್ರ ಸರಕಾರ ತಿಳಿಸಿದೆ. ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣವನ್ನು ಮರಳಿ ತರಬೇಕು ಎಂದು ಮಾಜಿ ಕಾನೂನು ಸಚಿವ ಮತ್ತು ಪ್ರಮುಖ ನ್ಯಾಯವಾದಿ ರಾಮ್ ಜೇಠ್ಮಲಾಲಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಇಂದು ಅಫಿಡವಿಟ್ ಸಲ್ಲಿಸಿದೆ. ಸ್ವಿಸ್ ಬ್ಯಾಂಕ್ ನಲ್ಲಿನ ಭಾರತೀಯರ ರಹಸ್ಯ ಖಾತೆಗಳಲ್ಲಿರುವ ಹಣವನ್ನು ಹೊರತೆಗೆಯುವ ಕಾರ್ಯಗಳು ನಡೆಯುತ್ತಿವೆ ಎಂದು ಕೇಂದ್ರ ತನ್ನ ಅಫಿಡವಿಟ್ ನಲ್ಲಿ ಹೇಳಿದೆ. ಜೇಠ್ಮಲಾನಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ನೇತೃತ್ವದ ವಿಭಾಗೀಯ ಕೈಗೆತ್ತಿಕೊಂಡಿತ್ತು.

ಆದರೆ ಈಗ ದೇಶದಲ್ಲಿ ಚುನಾವಣೆಗಳು ನಡೆಯುತ್ತಿವೆ. ಈಗ ಇದರ ವಿಚಾರಣೆಯ ಔಚಿತ್ಯವೇನು ಎಂದು ಪ್ರಶ್ನಿಸಿದ್ದರು ಹೆಚ್ಚುವರಿ ಸಾಲಿಸಿಟರ್ ಜೆನರಲ್ ಗೋಪಾಲ ಸುಬ್ರಹ್ಮಣ್ಯಂ. ಹಾಗಾಗಿ ಸರ್ವೋಚ್ಚ ನ್ಯಾಯಾಲಯ ವಿಚಾರಣೆಯನ್ನು ಮೇ 4ಕ್ಕೆ ಮುಂದೂಡಿತು. ಆದರೆ ಫಿರ್ಯಾದಿ ಜೇಠ್ಮಲಾನಿ ಅವರು ಸರಕಾರ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆಗ್ರಹಿಸಿದ್ದರು. ಹಾಗಾಗಿ ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರಕಾರ ಅಫಿಡವಿಟ್ ಸಲ್ಲಿಸಿದೆ.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X