ಫಲಿತಾಂಶದ ನಂತರ ಸಚಿವ ಸಂಪುಟ ಪುನರ್ ರಚನೆ
ಬೆಂಗಳೂರು, ಮೇ. 4 : ಲೋಕಸಭೆ ಚುನಾವಣೆಯ ಫಲಿತಾಂಶ ರಾಜ್ಯ ರಾಜಕೀಯದ ಮೇಲೆ ಅಂತಹ ಪ್ರಭಾವ ಬೀರದಿರಬಹುದು. ಆದರೆ, ರಾಜ್ಯ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆಗಳಿವೆ. ಲೋಕಸಭೆ ಫಲಿತಾಂಶ ಇದೇ 16 ರಂದು ಹೊರಬೀಳಲಿದೆ. ಇದರ ಬೆನ್ನಲ್ಲೇ ಸಂಪುಟ ಪುನರ್ ರಚನೆ ಆಗಲಿದೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಬಿಜೆಪಿ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ.
ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರನ್ನು ಸೇರಿಸಿಕೊಳ್ಳುವ ಸಂಭವ ಹೆಚ್ಚಾಗಿದೆ. ಈಗ 115 ಬಿಜೆಪಿ ಶಾಸಕರಿದ್ದು, 6 ಮಂದಿ ಪಕ್ಷೇತರರ ಶಾಸಕರಿದ್ದಾರೆ. ಮೊದಲಿಗಿಂತ ಮುಖ್ಯಮಂತ್ರಿ ಯಡಿಯೂರಪ್ಪ ಗಟ್ಟಿಯಾಗಿದ್ದು, ಸಂಪುಟ ಪುನರ್ ರಚನೆಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿರುವ ವಿ ಸೋಮಣ್ಣ ಅವರು ನಗರಾಭಿವೃದ್ಧಿ ಖಾತೆಯೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಯಡಿಯೂರಪ್ಪ ಸಮ್ಮತಿಸಿದ್ದಾರೆ. ಇದರಿಂದ ಸೋಮಣ್ಣ ಮರುಚುನಾವಣೆಯಲ್ಲಿ ಸರಳವಾಗಿ ಗೆಲ್ಲುವ ಯೋಚನೆ ಯಡಿಯೂರಪ್ಪ ಅವರದಾಗಿದೆ.
ಸಂಪುಟದಲ್ಲಿ ಯಾರನ್ನು ಕೈಬಿಡಬೇಕು ಎಂದು ಚರ್ಚೆ ಆರಂಭವಾಗಿದ್ದು, ಒಂದಿಬ್ಬರು ಪಕ್ಷೇತರ ಶಾಸಕರು ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಪಕ್ಷೇತರರಲ್ಲಿ ಗೂಳಿಹಟ್ಟಿ ಶೇಖರ್ ಹಾಗೂ ವೆಂಕಟರಮಣಪ್ಪ ಅವರ ಸಚಿವ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಗುಲ್ಬರ್ಗಾ ಲೋಕಸಭೆ ಕ್ಷೇತ್ರದಲ್ಲಿ ರೇವೂ ನಾಯಕ್ ಬೆಳಮಗಿ ಗೆದ್ದರೆ ಅವರೂ ಕೂಡಾ ಸಚಿವ ಸ್ಥಾನ ತೊರೆಯಲಿದ್ದಾರೆ. ಹಾಗೂ ಸ್ಪೀಕರ್ ಶೆಟ್ಟರ್ ಸಚಿವರಾಗುವ ಸಾಧ್ಯತೆ ಇದ್ದು, ಹಾವೇರಿ ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಗೆದ್ದರೆ, ಅವರ ತಂದೆ ಸಿ ಎಂ ಉದಾಸಿ ಸಚಿವ ಸ್ಥಾನ ತೆರವು ಮಾಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications