ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಪ್ರಧಾನಮಂತ್ರಿಯಾಗಲಿ, ರಾಜ್ ಠಾಕ್ರೆ

By Staff
|
Google Oneindia Kannada News

ಮುಂಬೈ, ಮೇ. 5 : ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ನಂತರ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖಂಡ ರಾಜ್ ಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಲು ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿರುವ ರಾಜ್, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ ಎನ್ನುವುದು ತಜ್ಞರ ಅಭಿಮತವಾಗಿದೆ.

ಬಿಜೆಪಿ ಮುಖಂಡ ನರೇಂದ್ರ ಮೋದಿ ಗುಜರಾತ ರಾಜ್ಯವನ್ನು ಹೇಗೆ ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದಾರೆ ಎನ್ನುವುದು ತಿಳಿದಿರುವ ಸಂಗತಿ. ಅದೇ ಹಾದಿಯಲ್ಲಿ ಮಹಾರಾಷ್ಟ್ರದ ಅಭಿವೃದ್ಧಿಯ ಕನಸನ್ನು ಕಾಣುತ್ತಿರುವೆ. ದೇಶದ ಸಮಗ್ರವಾಗಿ ಅಭಿವೃದ್ಧಿ ಕಾಣಬೇಕಾದರೆ ಮೋದಿಯಂತಹ ನಾಯಕ ಹಾಗೂ ನಾಯಕತ್ವ ಬೇಕು ಎಂದು ರಾಜ್ ಠಾಕ್ರೆ ಪ್ರತಿಪಾದಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ನಿತಿನ್ ಗದಕಾರಿ ಅವರನ್ನು ಮನಸಾರೆ ಹೊಗಳಿದ ರಾಜ್, ಲೋಕಸಭೆ ಚುನಾವಣೆಯಲ್ಲಿ ಗದಕಾರಿ ನೇತೃತ್ವದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ ಈಗಾಗಲೇ ಬಿಜೆಪಿ-ಶಿವಸೇನೆ ಮೈತ್ರಿ ಕಳೆದ 20 ವರ್ಷಗಳಿಂದ ಮುಂದುವರೆಸಿಕೊಂಡು ಬಂದಿದೆ. ಆದರೆ, ರಾಜ್ ಠಾಕ್ರೆ ಅವರ ನವನಿರ್ಮಾಣ ವೇದಿಕೆ ಬಗ್ಗೆ ಶಿವಸೇನೆ ನಾಯಕ ಬಾಳಾ ಠಾಕ್ರೆ ಅವರಿಗೆ ಅಷ್ಟಕಷ್ಟೆ. ಅದು ಅಲ್ಲದೇ ಮರಾಠಿ ಮುಖಂಡರೊಬ್ಬರು ಪ್ರಧಾನಿಯಾಗುವುದಾದರೆ ನಮ್ಮ ಬೆಂಬಲವಿದೆ ಎನ್ನುವ ಮೂಲಕ ಬಾಳಾಠಾಕ್ರೆ, ಎನ್ ಸಿಪಿ ನಾಯಕ ಶರದ್ ಪವಾರ್ ಅವರಿಗೆ ಬೆಂಬಲ ಘೋಷಿಸಿದ್ದರು. ಈ ಎಲ್ಲ ಬೆಳವಣಿಗೆಗಳನ್ನು ರಾಜ್ ಠಾಕ್ರೆ ಅವರು ಮೆಟ್ಟಿ ನಿಲ್ಲುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X