ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾನೇಕೆ ಪ್ರಧಾನಿಯಾಗಬಾರದು: 'ಮಾಯಾ' ಪ್ರಶ್ನೆ

By Staff
|
Google Oneindia Kannada News

If Manmohan can become PM why can't I: Maya
ಲಖನೌ, ಮೇ.6 : ಪ್ರಜಾಪ್ರಭುತ್ವದ ಅತೀದೊಡ್ಡ ದೇಶವಾಗಿರುವ ಭಾರತಕ್ಕೆ ಹಿಂಬಾಗಿಲಿನಿಂದ ಸಂಸತ್ ಪ್ರವೇಶಿಸಿರುವ ಮನಮೋಹನ್ ಸಿಂಗ್ ರಂಥ ಮುಖಂಡರು ಪ್ರಧಾನಮಂತ್ರಿ ಹುದ್ದೆ ಅಲಂಕರಿಸುತ್ತಾರೆಂದರೆ? ನಾನು ದಲಿತ ಮಹಿಳೆ, ಅಲ್ಲದೇ ಅನೇಕ ಚುನಾವಣೆಗಳನ್ನು ಎದುರಿಸಿದ್ದೇನೆ. ದೇಶದ ದೊಡ್ಡ ರಾಜ್ಯವೊಂದರ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿದ ಅನುಭವ ನನಗಿದೆ. ನಾನೇಕೆ ಪ್ರಧಾನಮಂತ್ರಿ ಆಗಬಾರದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಪ್ರಶ್ನಿಸಿದ್ದಾರೆ.

ಆಗ್ರದಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಎಲ್ಲ ಮುಖಂಡರೂ ಪ್ರಧಾನಮಂತ್ರಿ ಆಗಬೇಕು ಎಂದು ಆಸೆ ಪಡುತ್ತಾರೆ. ಅದರಲ್ಲಿ ನಾನು ಒಬ್ಬಳು ಎಂದ ಮಾಯಾವತಿ, ನಾನು ಕೂಡಾ ಅನೇಕ ಚುನಾವಣೆಗಳನ್ನು ಎದುರಿಸಿದ್ದೇನೆ, ಗೆದ್ದಿದ್ದೇನೆ, ಮುಖ್ಯಮಂತ್ರಿ ಆಗಿರುವೆ. ಇಷ್ಟೆಲ್ಲಾ ಅನುಭವ ಇರುವ ನನಗೆ ಪ್ರಧಾನಮಂತ್ರಿ ಆಗುವ ಯೋಗ್ಯತೆ ಇಲ್ಲವೆ ಎಂದು ಅವರು ಪ್ರಶ್ನಿಸಿದರು.

ರಾಜ್ಯಸಭಾ ಸದಸ್ಯರಾಗಿರುವ ಮನಮೋಹನ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಿರುವ ಸೋನಿಯಾ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಮಾಯಾವತಿ, ಇದು ಪ್ರಜಾಪ್ರಭುತ್ವದ ವಿರೋಧಿ ಕೃತ್ಯ ಎಂದು ನಿಂದಿಸಿದರು. ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಿದೆ. ಈ ಪಕ್ಷದ ಬುನಾದಿಗೆ ಗೆದ್ದಿಲು ಹಿಡಿದಿದೆ. ಶೀಘ್ರದಲ್ಲಿ ಅದು ಅವಸಾನವಾಗಲಿದೆ ಎಂದು ಅವರು ಲೇವಡಿ ಮಾಡಿದರು. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಬಿಎಸ್ಪಿ ಅತೀ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರಲ್ಲದೇ, ದೆಹಲಿ ಗದ್ದುಗೆ ಏರಲು ನನಗೊಂದು ಅವಕಾಶ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X