ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ

By Staff
|
Google Oneindia Kannada News

BSY's Rs 800-cr gift to Bangalore
ಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.

ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಜಂಕ್ಷನ್ ಗಳ ಹೊರತಾಗಿಯೂ ನಗರದ ಕೇಂದ್ರ ಭಾಗಗಳಲ್ಲಿ 450 ಕೋಟಿ ವೆಚ್ಚದಲ್ಲಿ ಎಂಟು ಜಂಕ್ಷನ್ ನಿರ್ಮಿಸುವುದು. ರಸ್ತೆ ಮತ್ತು ಒಳಚರಂಡಿ ಸೇರಿದಂತೆ ಮೂಲಸೌಲಭ್ಯ ಅಭಿವೃದ್ದಿ ಮುಂತಾದ ಹಲವಾರು ಯೋಜನೆಯನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಯ ಮಾದರಿಯಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಿಸಲು ಈಗಾಗಲೇ ಕಾರ್ಯ ಸೂಚನೆ ರೂಪಿಸಲಾಗಿದೆ. ಅಲ್ಲದೇ ಸೂಕ್ತವಾದ ನಿವೇಶನ ಹುಡುಕಲು ಬಿಡಿಎ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗಿರುವ ಪ್ರದೇಶಗಳಲ್ಲಿ 623 ಕೋಟಿ ರುಪಾಯಿ ವೆಚ್ಚದಲ್ಲಿ 1544 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ರಸ್ತೆ ಅಭಿವೃದ್ದಿ, ಒಳಚರಂಡಿ, ಆಟದ ಮೈದಾನ, ಉದ್ಯಾನವನ ಹಾಗೂ ಕೆರೆ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾಮಗಾರಿ ತ್ವರಿತಗೊಳಿಸಲು ಬಿಡಿಎ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X