ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್-ಬಿಜೆಪಿ ಮೈತ್ರಿ, ಶತ್ರು ಆಶಯ

By Staff
|
Google Oneindia Kannada News

ನವದೆಹಲಿ, ಮೇ. 13 : ಕೇಂದ್ರದ ಅಧಿಕಾರದ ಗದ್ದುಗೆ ಏರಲು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳ ಮನೆ ಬಾಗಲಿಗೆ ಎಡತಾಕುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟ ಹಾಗೂ ಪಾಟ್ನಾ ಸಾಹೇಬ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶತ್ರುಘ್ನ ಸಿನ್ಹಾ ವಿಶಿಷ್ಟ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ದೇಶದ ಘನತೆ, ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡಲು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಪಕ್ಷಕ್ಕಿಂತ ಅದರ ನಾಯಕರಿಗಿಂತ ದೇಶ ದೊಡ್ಡದು. ದೇಶದಲ್ಲಿ ಜನರು ನೆಮ್ಮದಿಯಿಂದಿದ್ದರೆ, ರಾಜಕೀಯ ಪಕ್ಷಗಳ ಆಟ ನಡೆಸಬಹುದು ಎಂದು ಅವರು, ದೇಶದ ಒಳಿತಿಗೆ ಎರಡು ರಾಷ್ಟ್ರೀಯ ಪಕ್ಷಗಳು ಒಂದಾಗುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಪ್ರಾದೇಶಿಕ ಪಕ್ಷಗಳಿಂದ ಕೇಂದ್ರದಲ್ಲಿ ಸರಕಾರ ರಚಿಸಿದರೆ, ಸರಕಾರ ರಚಿಸಿದರೆ, ದೇಶದ ಸಮಗ್ರತೆಯನ್ನು ಕಾಪಾಡಲು ಅಸಾಧ್ಯ ಎಂದು ಆರೋಪಿಸಿದರು.

ಜಗತ್ತಿನ ಪ್ರಮುಖ ದೇಶಗಳಲ್ಲಿ ಆ ದೇಶದ ಪ್ರಮುಖ ಪಕ್ಷಗಳು ಒಂದಾಗಿ ಸರಕಾರ ರಚಿಸಿ ಉತ್ತಮ ಆಡಳಿತ ನೀಡುತ್ತಿರುವ ನಿದರ್ಶನಗಳು ನಮ್ಮ ಕಣ್ಮುಂದಿವೆ. ಇದೇ ಮಾದರಿ ಭಾರತದ ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸರಕಾರ ರಚನೆಗೆ ಮುಂದಾದರೆ ದೇಶದ ಹಿತ ಕಾಪಾಡಬಹುದು ಎಂದು ಹೇಳಿದ್ದಾರೆ. ಈ ಎರಡು ಪಕ್ಷಗಳಲ್ಲಿ ಯಾವ ಪಕ್ಷಕ್ಕೆ ಅತೀ ಹೆಚ್ಚು ಸ್ಥಾನಗಳ ಲಭ್ಯವಾಗುತ್ತವೆಯೋ ಈ ಪಕ್ಷದ ನಾಯಕರು ಪ್ರಧಾನಮಂತ್ರಿ ಆಗಬೇಕು ಎಂದು ಸಿನ್ಹಾ ವಿವರಿಸಿದರು.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X