ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ಸೋನಿಯಾ ಭೇಟಿ ಸಮರ್ಥನೆ

By Staff
|
Google Oneindia Kannada News

RV Deshapande
ಬೆಂಗಳೂರು, ಮೇ. 16 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿರುವುದನ್ನು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಸ್ವಾಗತಿಸಿದ್ದಾರೆ. ಈ ಮೂಲಕ ಫಲಿತಾಂಶದ ನಂತರ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬುದನ್ನು ಅವರು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಕೋಮುವಾದಿ ಪಕ್ಷಗಳನ್ನು ಅಧಿಕಾರದಿಂದ ದೂರವಿಡಲು ಜಾತ್ಯಾತೀತ ಪಕ್ಷಗಳು ಒಂದುಗೂಡಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಜೆಡಿಎಸ್ ನಾಯಕರು ಭೇಟಿ ಮಾಡಿದ್ದರೂ ಮಾಡಿರಬಹುದು, ಅದರಲ್ಲಿ ತಪ್ಪೇನಿಲ್ಲ ಎಂದು ಅವರು ಸಮರ್ಥಿಸಿಕೊಂಡ ದೇಶಪಾಂಡೆ, ರಾಜ್ಯದ ಸಮಸ್ಯೆಗಳನ್ನು ಚರ್ಚಿಸಲು ಭೇಟಿ ಮಾಡಿರುವುದಾಗಿ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟಪಡಿಸಿದ್ದಾರೆ. ಇದಕ್ಕಿಂತ ಹೆಚ್ಚಿನ ಅರ್ಥ ಇದಕ್ಕೆ ಬೇಡ ಎಂದರು.

ಕೇಂದ್ರದಲ್ಲಿ ಜಾತ್ಯಾತೀತ ಸರಕಾರ ಅಧಿಕಾರಕ್ಕೆ ಬರಬೇಕು ಎನ್ನುವುದು ಜನತೆಯ ಅನಿಸಿಕೆಯಾಗಿದೆ. ಇಂಥ ಮಹತ್ವದ ಸಂದರ್ಭದಲ್ಲಿ ಜೆಡಿಎಸ್ ಯುಪಿಎಗೆ ಸರಕಾರ ರಚಿಸಲು ಮುಂದಾಗಿದ್ದು ಒಳ್ಳೇ ಬೆಳವಣಿಗೆ ಎಂದು ಅವರು ಹೇಳಿದರು. ನಂತರ ಯಥಾ ಪ್ರಕಾರ ಬಿಜೆಪಿ ಸರಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.

(ದಟ್ಸ್ ಕನ್ನಡ ವಾರ್ತೆ)

ಯುಪಿಎಗೆ ಬೆಂಬಲ : ಕುಮಾರಣ್ಣ ಕೇಂದ್ರ ಮಂತ್ರಿ ?
ಕುಮಾರ್-ಸೋನಿಯಾ ಭೇಟಿ : ಗೌಡ ಸ್ಪಷ್ಟನೆ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X