ರಾಘವೇಂದ್ರ, ದೇವೇಗೌಡ ಗೆಲುವು
ಬೆಂಗಳೂರು, ಮೇ. 16 : ಉತ್ತರ ಕನ್ನಡ ಲೋಕಸಭೆ ಫಲಿತಾಂಶ ಕ್ಷೇತ್ರದ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಅವರು ಬಿಜೆಪಿ ಅನಂತಕುಮಾರ್ ಹೆಗಡೆ ವಿರುದ್ದ ಸೋತಿದ್ದಾರೆ. ರಾಷ್ಟ್ರದಲ್ಲಿ ಯುಪಿಎ ಭರ್ಜರಿ ಜಯಭೇರಿ ಬಾರಿಸುತ್ತಿರುವ ಬೆನ್ನಲ್ಲೇ ಮೈಸೂರಿನಲ್ಲಿ ವಿಶ್ವನಾಥ ಹೊರತುಪಡಿಸಿದರೆ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವಾಗುವ ಫಲಿತಾಂಶ ಹೊರಬೀಳತೊಡಗಿದೆ.
ರಾಷ್ಟದ ಗಮನ ಸೆಳೆದಿದ್ದ ಶಿವಮೂಗ್ಗ ಲೋಕಸಭೆ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರು ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಗ ಬಿ ವೈ ರಾಘವೇಂದ್ರ ಅವರ ವಿರುದ್ಧ ಭಾರಿ ಮತಗಳ ಅಂತರದಿಂದ ಸೋತಿದ್ದಾರೆ. ರಾಘವೇಂದ್ರ ಅವರು 52, 694 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ನಿರೀಕ್ಷೆಯಂತೆ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಹಾಸನ ಲೋಕಸಭೆ ಕ್ಷೇತ್ರದಲ್ಲಿ 1. 70 ಲಕ್ಷ ಮತಗಳ ಅಂತರದಿಂದ ಬಿಜೆಪಿಯ ಎಚ್ ಕೆ ಹನುಮೇಗೌಡ ಅವರನ್ನು ಸೋಲಿಸಿದ್ದಾರೆ. ಧಾರವಾಡ ಕ್ಷೇತ್ರದ ಹಾಲಿ ಸಂಸದ ಹಾಗೂ ಬಿಜೆಪಿ ಪಕ್ಷದ ಹುರಿಯಾಳು ಪ್ರಲ್ಹಾದ ಜೋಶಿ ಅವರು ಕಾಂಗ್ರೆಸ್ ಪಕ್ಷದ ಮಂಜುನಾಥ ಕುನ್ನೂರು ಅವರನ್ನು 1.14 ಲಕ್ಷ ಮಕಗಳ ಅಂತರದಿಂದ ಗೆದ್ದಿದ್ದಾರೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಅವರು ಕಾಂಗ್ರೆಸ್ ಜಯಪ್ರಕಾಶ್ ಹೆಗಡೆ ಅವರನ್ನು ಸೋಲಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications