ಧರ್ಮಸಿಂಗ್, ವೀರಪ್ಪ ಮೊಯ್ಲಿ ಜಯಭೇರಿ
ಬೆಂಗಳೂರು, ಮೇ. 16 : ಜೇವರ್ಗಿ ವಿಧಾನಸಭೆ ಕ್ಷೇತ್ರದಿಂದ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಯನೀಯ ಸೋಲು ಅನುಭವಿಸಿದ್ದ ಮಾಜಿ ಮುಖ್ಯಮಂತ್ರಿ ಎನ್ ಧರ್ಮಸಿಂಗ್ ಅವರು ಗೆಲುವು ಸಾಧಿಸಿದ್ದಾರೆ. ಆಪರೇಶನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡಿದ್ದ ಗುರುಪಾದಪ್ಪ ನಾಗಮಾರಪಳ್ಳಿ ಸೋಲು ಕಂಡಿದ್ದಾರೆ. ಬೀದರ್ ಉಪಚುನಾವಣೆಯಲ್ಲಿ ಅವರ ಮಗ ಸೂರ್ಯಕಾಂತ ನಾಗಮಾರಪಳ್ಳಿ ಕೂಡಾ ಸೋತಿದ್ದಾರೆ.
ಬೀದರ್ ಲೋಕಸಭೆದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಳ್ಳಿ ಅವರನ್ನು ಸುಮಾರು 38 ಮತಗಳ ಅಂತರದಿಂದ ಧರ್ಮಸಿಂಗ್ ಜಯಗಳಿಸಿದ್ದಾರೆ. ಇನ್ನೊಂದಡೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ನಾಲ್ಕು ಬಾರಿ ಮಂಗಳೂರು ಲೋಕಸಭೆಯಿಂದ ಸ್ಪರ್ಧಿಸಿದ್ದ ಮೊಯ್ಲಿ ಸೋಲನ್ನೇ ಕಂಡಿದ್ದಾರೆ. ಆದರೆ, ಈ ಬಾರಿ ಅವರು ಚಿಕ್ಕಬಳ್ಳಾಪುರದಿಂದ ಗೆದ್ದಿರುವುದು ವಿಶೇಷವಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications