ಸಿದ್ದೇಶ್, ಜಿ ಎಸ್ ಬಸವರಾಜು ಗೆಲುವು
ಬೆಂಗಳೂರು, ಮೇ. 16 : ತುಮಕೂರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ ಎಸ್ ಬಸವರಾಜು ಜಯಗಳಿಸಿದ್ದಾರೆ. ತಮ್ಮ ಸಮೀಪಿದ ಪ್ರತಿಸ್ಪರ್ಧಿ ಜೆಡಿಎಸ್ ನ ಮುದ್ದುಹನುಮೇಗೌಡ ಅವರನ್ನು ಸುಮಾರು 30 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಆರಂಭದಿಂದ ಕೊನೆ ಕ್ಷಣದವರೆಗೂ ಕಾಂಗ್ರೆಸ್ ಅಭ್ಯರ್ಥಿ ಎಸ್ ಎಸ್ ಮಲ್ಲಿಕಾರ್ಜುನ ಮುಂದಿದ್ದರು. ಆದರೆ ಪವಾಡಸದೃಶ ರೀತಿಯಲ್ಲಿ ಮೇಲೆದ್ದ ಬಿಜೆಪಿಯ ಜಿ ಎಂ ಸಿದ್ದೇಶ್ ಅವರು 2800 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ಕೇಂದ್ರದಲ್ಲಿ ಬಿಜೆಪಿಯ ಪಿ ಸಿ ಮೋಹನ್ ಮುಂದಿದ್ದರೆ, ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ವೀರಪ್ಪ ಮೊಯ್ಲಿ ಅವರು ಸುಮಾರು 21 ಸಾವಿರಕ್ಕೂ ಅಧಿಕ ಮತಗಳಿಂದ ಮುಂದಿದ್ದಾರೆ. ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧರ್ಮಸಿಂಗ್ ಭಾರಿ ಮುನ್ನಡೆ ಗಳಿಸಿದ್ದು, ಗೆಲವಿನ ಹೊಸ್ತಿನಲ್ಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications