ಅಂಬರೀಷ್, ಪೂಜಾರಿಗೆ ಸೋಲು, ಚಂದ್ರೇಗೌಡಗೆ ಜೈ

ಬೆಂಗಳೂರು, ಮೇ. 16 : ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚಿತ್ರನಟ ಅಂಬರೀಷ್ ಅವರ ಸೋಲು ಕಂಡಿದ್ದಾರೆ. ಜೆಡಿಎಸ್ ನ ಚೆಲುವರಾಯಸ್ವಾಮಿ ಅವರ ಅಚ್ಚರಿ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ. ರಾಜ್ಯದ ರಾಜಕಾರಣದಲ್ಲಿ ಭಾರಿ ಮಹತ್ವದ ಪಡೆದುಕೊಂಡಿದ್ದ ಗುಲ್ಬರ್ಗಾ ಕ್ಷೇತ್ರದ ಫಲಿತಾಂಸ ಹೊರಬಿದ್ದಿದ್ದು, ಪಶು ಸಂಗೋಪನೆ ಸಚಿವ ರೇವೂ ನಾಯಕ್ ಬೆಳಮಗಿ ಅವರನ್ನು ಸುಮಾರು 14 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಬಿಜೆಪಿಯ ನಳೀನ್ ಕುಮಾರ್ ಕಟೀಲ್ ಅವರೆದುರು ಸೋತಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೇಂದ್ರ ಸಚಿವ ಕೆ ಎಚ್ ಮುನಿಯಪ್ಪ ಅವರು ಬಿಜೆಪಿ ಡಿ ಎಸ್ ವೀರಯ್ಯ ಅವರನ್ನು ಸೋಲಿಸಿ ವಿಜಯಮಾಲೆ ಧರಿಸಿದ್ದಾರೆ.

ಬೆಂಗಳೂರು ಉತ್ತರದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯನಾಯಕ ಸಿ ಕೆ ಜಾಫರ್ ಷರೀಫ್ ಅವರನ್ನು ಸೋಲಿಸುವ ಮೂಲಕ ಬಿಜೆಪಿ ಚಂದ್ರೇಗೌಡ ಅವರ ಜಯಗಳಿಸಿದ್ದಾರೆ. ಕೊನೆ ಕ್ಷಣದಲ್ಲಿ ಅಭ್ಯರ್ಥಿ ಬದಲಾವಣೆಯಿಂದ ಮತದಾರಲ್ಲಿ ಕೆಲ ಗೊಂದಲ ಸೃಷ್ಟಿಯಾಗಿತ್ತು. ಇದರಿಂದ ಬಿಜೆಪಿ ಗೆಲುವಿಗೆ ಅಡ್ಡಿಯಾಗಲಿದೆ ಎನ್ನಲಾಗಿತ್ತು. ಆದರೆ, ಅದೆನ್ನಲ್ಲಾ ಸುಳ್ಳು ಮಾಡಿದ ಶ್ರೀರಾಮುಲು ಸಂಬಂಧಿ ಸಣ್ಣಫಕ್ಕೀರಪ್ಪ ಅವರು ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜಾ ವೆಂಕಟಪ್ಪ ನಾಯಕ ಅವರನ್ನು ಸೋಲಿಸಿ ವಿಜಯಿಯಾಗಿದ್ದಾರೆ. ಕೊಪ್ಪಳದಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಬಸವರಾಜ ರಾಯರೆಡ್ಡಿ, ಜೆಡಿಎಸ್ ಕಾರ್ಯಾಧ್ಯಕ್ಷ ಇಕ್ಬಾಲ್ ಅನ್ಸಾರಿ ಅವರನ್ನು ಬಿಜೆಪಿ ಶಿವರಾಮೇಗೌಡ ಹಿಂದಿಕ್ಕಿ ಜಯಗಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+