ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು

By Staff
|
Google Oneindia Kannada News

Naveen patnaik
ಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ.

ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದೆ. ಇನ್ನು ಮತ ಎಣಿಕೆ ಮುಂದುವರೆದಿದೆ. ಅಲ್ಲದೇ 15 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಡಿ ಮುನ್ನಡೆ ಕಾಯ್ದುಕೊಂಡಿದ್ದು, 6 ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ನವೀನ ಪಟ್ನಾಯಕ್, ಯುಪಿಎಗೆ ಬೆಂಬಲ ನೀಡುವ ಕುರಿತು ಯಾವುದೇ ಚಿಂತನೆ ನಡೆಸಿಲ್ಲ. ಫಲಿತಾಂಶ ಸಂಪೂರ್ಣ ಹೊರಬಿದ್ದ ನಂತರ ಮುಂದಿನ ಕ್ರಮಗಳ ಬಗ್ಗೆ ಘೋಷಿಸುವುದಾಗಿ ಹೇಳಿದರು.

(ಏಜನ್ಸೀಸ್)

ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X