ಮೋದಿ ಪಿಎಂ ಹೇಳಿಕೆ ಸೋಲಿಗೆ ಕಾರಣ, ಬಿಜೆಡಿ
ನವದೆಹಲಿ, ಮೇ. 16 : ಬಿಜೆಪಿ ಪಕ್ಷದಲ್ಲಿ ಸೋಲಿನ ಆತ್ಮಾವಲೋಕನ ಆರಂಭವಾಗಿರುವ ಬೆನ್ನಲ್ಲೇ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿ ಎಂದೇ ಬಿಂಬಿಸಿದ್ದೇ ಪಕ್ಷದ ಸೋಲಿನ ಕಾರಣವಾಗಿದೆ ಎಂದು ಬಿಜೆಪಿ ಮುಖಂಡ ಚಂದನ್ ಮಿತ್ರಾ ಹೇಳಿದ್ದಾರೆ. ಸೋಲಿನಿಂದ ಕಂಗಾಲಾಗಿರುವ ಪಕ್ಷದಲ್ಲೀಗ ಕೆಸರೆರಚಾಟ ಆರಂಭವಾಗುವ ಲಕ್ಷಣಗಳು ಕಂಡು ಬಂದಿವೆ.
ಚುನಾವಣೆ ಪ್ರಚಾರದ ಮಧ್ಯದಲ್ಲಿ ನರೇಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿ ಎಂದು ಘೋಷಣೆ ಮಾಡಿದ್ದೆ ದೊಡ್ಡ ಲೋಪ ಎಂದು ಮಿತ್ರಾ ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಸೋಲಿನ ಬಗ್ಗೆ ಮಾತನಾಡಿದ ಅವರು, ಪಕ್ಷದ ಹಿರಿಯ ನಾಯಕರು ಸಾರ್ವಜನಿಕವಾಗಿ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದು ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಆರೋಪಿಸಿದ್ದಾರೆ. ಮೋದಿ ಅವರನ್ನು ಪ್ರಧಾನಿ ಸ್ಥಾನಕ್ಕೆ ಬಿಂಬಿಸಿದ್ದು ತಪ್ಪು. ಈ ಹೇಳಿಕೆ ಜನರ ಮೇಲೆ ಭಾರಿ ಪರಿಣಾಮ ಬೀರಿದೆ ಎಂದು ಮಿತ್ರಾ ಹೇಳಿದ್ದಾರೆ.
ಮಾಜಿ ಕೇಂದ್ರದ ಸಚಿವ ಅರುಣ್ ಶೌರಿ, ಅರುಣ್ ಜೈಟ್ಲೀ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಚುನಾವಣೆ ಪ್ರಚಾರ ಕಾರ್ಯದಲ್ಲಿ ಮೋದಿ ಅವರನ್ನು 2014ರ ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂದು ಹೇಳಿದ್ದರು.
(ಏಜನ್ಸೀಸ್)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications