ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಭಾರಿ ಸ್ಥಾನ

ಲಖನೌ, ಮೇ. 16 : ಕೇಂದ್ರ ಸರಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ರಾಜ್ಯ ಎಂದೇ ಖ್ಯಾತಿ ಪಡಿದಿರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಆಶ್ಚರ್ಯಕರ ರೀತಿಯಲ್ಲಿ ಉತ್ತಮ ಸಾಧನೆ ಮಾಡಿದೆ. ಪ್ರಾದೇಶಿಕ ಪಕ್ಷಗಳಾದ ಬಿಎಸ್ಪಿ, ಎಸ್ಪಿ ಪಕ್ಷಗಳದ್ದೇ ಪಾರುಪತ್ಯೆ ನಡೆಸುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಭಾರಿ ಜಯ ತಂದುಕೊಂಡಿದೆ.

ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲಿ 23 ರಲ್ಲಿ ಬಿಎಸ್ಪಿ, 22 ರಲ್ಲಿ ಸಮಾಜವಾದಿ ಪಕ್ಷ, 21 ರಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಕೇವಲ 9 ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಯ್ ಬರೇಲಿಯಲ್ಲಿ 29 ಸಾವಿರ ಮತಗಳಿಂದ ಮುಂದಿದ್ದರೆ, ಅವರ ಮಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಸುಮಾರು 12 ಸಾವಿರ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿ ಮಿತ್ರ ಪಕ್ಷ ಆರ್ ಎಲ್ ಡಿ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ 12 ಸಾವಿರಗಳಿಂದ ಮುಂದಿದ್ದಾರೆ. ಎಸ್ಪಿ ಮುಖಂಡ ಮುಲಾಯಂ ಸಿಂಗ್ ಮೈನ್ ಪುರಿನಲ್ಲಿ 20 ಸಾವಿರ ಮತಗಳಿಂದ ಮುಂದೆ ಇದ್ದಾರೆ. ಮುಲಾಯಂ ಮಗ ಅಖಿಲೇಶ್ ಯಾದವ್ ಅವರು ಪಿರೋಜ್ ಬಾದ್ ಕ್ಷೇತ್ರದಲ್ಲಿ ಮುನ್ನಡೆ ಕಾಪಾಡಿಕೊಂಡಿದ್ದಾರೆ.

(ಏಜನ್ಸೀಸ್)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+