240 ರಲ್ಲಿ ಯುಪಿಎ; 164ರಲ್ಲಿ ಎನ್ ಡಿಎ ಮುನ್ನಡೆ
ನವದೆಹಲಿ, ಮೇ.16: ಕಾಂಗ್ರೆಸ್ ನೇತೃತ್ವದ ಯುಪಿಎ 240 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಬಿಜೆಪಿ ನೇತೃತ್ವದ ಎನ್ ಡಿಎ 162 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತೃತೀಯ ರಂಗ 89, ಚತುರ್ಥರಂಗ 32 ಮತ್ತು ಇತರೆ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಯುಪಿಎ , ಎನ್ ಡಿಎ ಹಾಗೂ ತೃತೀಯ ರಂಗ ತಲಾ ಒಂದೊಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ.
ಕಾಂಗ್ರೆಸ್ ಪಕ್ಷ 155 ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ 100 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಎಡಪಕ್ಷಗಳು ಸೇರಿದಂತೆ ತೃತೀಯ ರಂಗ 62 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಎಸ್ ಪಿ, ಆರ್ ಜೆಡಿ ಮತ್ತು ಎಲ್ ಜೆಪಿ ಪಕ್ಷಗಳ ಒಕ್ಕೂಟ ಚತುರ್ಥರಂಗ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಆಂಧ್ರಪ್ರದೇಶ, ಗುಜರಾತ್, ತಮಿಳುನಾಡು, ಹರ್ಯಾಣ, ಪಶ್ಚಿಮ ಬಂಗಾಳ, ದೆಹಲಿ, ರಾಜಸ್ತಾನ, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಮುನ್ನಡೆಯಲ್ಲಿವೆ. ಮಧ್ಯಪ್ರದೇಶ ಮತ್ತು ಕರ್ನಾಟಕದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಮುನ್ನಡೆ ಸಾಧಿಸಿವೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಎಸ್ ಪಿ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಬಿಎಸ್ ಪಿ 12 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಹಾಗೆಯೇ ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
(ಏಜೆನ್ಸೀಸ್)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications