ಕೇಂದ್ರದ ಕೊನೆಯ ಸಂಪುಟ ಸಭೆ ಆರಂಭ
ನವದೆಹಲಿ, ಮೇ. 18 : 14 ನೇ ಲೋಕಸಭೆಯ ಕೊನೆಯ ಸಚಿವ ಸಂಪುಟ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ರಾಂ ವಿಲಾಸ್ ಪಾಸ್ವಾನ ಸೇರಿ ಕಾಂಗ್ರೆಸ್ ಪಕ್ಷದೊಂದಿಗೆ ಸಂಬಂಧ ಕೆಡಿಸಿಕೊಂಡಿರುವ ಎಲ್ಲರೂ ಅಂತಿಮ ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಂಪುಟ ಸಭೆ ನಂತರ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರಕಾರ ವಜಾಗೊಳಿಸಲು ರಾಷ್ಟ್ರಪತಿಯವರಿಗೆ ವಿನಂತಿಸಲಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ ಕೇಂದ್ರ ಚುನಾವಣೆ ಆಯೋಗದ ಮುಖ್ಯಸ್ಥ ನವೀನ ಚಾವ್ಲಾ ಹಾಗೂ ಅವರ ಸಂಗಡಿಗರು 15 ನೇ ಲೋಕಸಭೆ ಚುನಾವಣೆಯಲ್ಲಿ ಆಯ್ಕೆಯಾಗಿರುವ ಸಂಸದರ ಪಟ್ಟಿಯನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಸಲ್ಲಿಸಲಿದ್ದಾರೆ. ರಾಷ್ಟ್ರಪತಿಯವರು ಲೋಕಸಭೆ ಸ್ಪೀಕರ್ ಅವರಿಗೆ ಪರಿಶೀಲನೆ ನಡೆಸಲು ಸೂಚನೆ ನೀಡುವ ಕಾರ್ಯಕ್ರಮವಿದೆ.
(ಏಜನ್ಸೀಸ್)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications