ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖರ್ಗೆಗೆ ಸಂಪುಟ ದರ್ಜೆ ಸ್ಥಾನಮಾನ ಖಚಿತ

By Staff
|
Google Oneindia Kannada News

Mallikarjun Kharge
ಬೆಂಗಳೂರು, ಮೇ.19 : ಹೈಕಮಾಂಡ್ ಆದೇಶದ ಮೇರೆಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆ ಸ್ಪರ್ಧಿಸಿ ಜಯಭೇರಿ ಬಾರಿಸಿರುವ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ ನೂತನವಾಗಿ ರಚನೆಯಾಗಲಿರುವ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗುವ ಸಾಧ್ಯತೆಗಳಿವೆ. ಸರಕಾರ ರಚನೆ ದಿನ ಸಮೀಪಿಸುತ್ತಿದ್ದಂತೆಯೇ ಸಚಿವರಾಗಲು ಪೈಪೋಟಿ ಜೋರಾಗಿ ಸಾಗಿದೆ. ಈ ಮಧ್ಯೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸರಕಾರ ರಚಿಸುವಂತೆ ಇಂದು ಮನಮೋಹನ್ ಸಿಂಗ್ ಅವರಿಗೆ ಅಧಿಕೃತ ಆಹ್ವಾನ ನೀಡುವ ಸಾಧ್ಯತೆಗಳಿವೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.

ದಲಿತ ವರ್ಗದ ಕೋಟಾದಲ್ಲಿ ಗುಲ್ಬರ್ಗಾದಿಂದ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ, ಅವರಲ್ಲದೆ ಬಾಬು ಜಗಜೀವನರಾಮ್ ಅವರ ಮಗಳು ಮೀರಾಕುಮಾರ್ ಮತ್ತು ಸೋಲ್ಲಾಪುರದ ಸಂಸದ ಸುಶೀಲ್ ಕುಮಾರ್ ಸಿಂಧೆ ಅವರಿಗೆ ಸಂಪುಟ ದರ್ಜೆಯ ಸಚಿವರಾಗಲಿದ್ದಾರೆ ಎನ್ನಲಾಗಿದೆ. ಆದರೆ, ಮೂವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಬೇಕು ಎಂದು ಡಿಎಂಕೆ ಇಟ್ಟಿರುವ ಬೇಡಿಕೆ ಬಗ್ಗೆ ಕಾಂಗ್ರೆಸ್ ಅಪಸ್ವರ ಎತ್ತಿದೆ. ಮೂವರ ಬದಲಿಗೆ ಇಬ್ಬರಿಗೆ ಸಂಪುಟ ದರ್ಜೆ ನೀಡಲಾಗುವುದು ಎಂದು ಹೇಳಿದೆ.

ಕರುಣಾನಿಧಿ ಮಗಳು ಕನ್ನಿಮೋಳಿ, ಎಂ ಕೆ ಅಳಗಿರಿ ಹಾಗೂ ದಯಾನಿಧಿ ಮಾರನ್ ಅವರಿಗೆ ಸಂಪುಟ ಸ್ಥಾನಮಾನಬೇಕು ಎಂಬ ಬೇಡಿಕೆ ಇಟ್ಟಿತ್ತು. ಇನ್ನೊಂದೆಡೆ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಅವರನ್ನು ಹಣಕಾಸು ಸಚಿವರನ್ನಾಗಿಸಲು ಕಾಂಗ್ರೆಸ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಣಬ್ ಮುಖರ್ಜಿ ಅವರನ್ನು ವಿತ್ತ ಮಂತ್ರಿ ಮಾಡಲು ಕಾಂಗ್ರೆಸ್ ಒಲವು ತೋರಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X