ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಡೋನೇಷಿಯಾದಲ್ಲಿ ವಿಮಾನ ಅಪಘಾತ

By Staff
|
Google Oneindia Kannada News

ಜಕಾರ್ತ, ಮೇ. 20 : ಇಂಡೋನೇಷಿಯಾ ಸೇನಾಪಡೆಗೆ ಸೇರಿದ ವಿಮಾನವೊಂದು ಅಪಘಾತಕ್ಕೀಡಾಗಿ 78 ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಜಾವಾ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಸದ್ಯದ ಮಾಹಿತಿ ಪ್ರಕಾರ 78 ಮಂದಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ವಿಮಾನ ಅಪಘಾತಕ್ಕೆ ಕಾರಣ ತಿಳಿದಿಲ್ಲ. ವಿಮಾನ ಅಪಘಾತವಾಗಿದ್ದರಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ ಎಂದು ಜಕಾರ್ತ್ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ವಿಮಾನ 98 ಮಂದಿ ಪ್ರಯಾಣಿಕರು ಹಾಗೂ 14 ಇಲಾಖೆ ಸಿಬ್ಬಂದಿಗಳನ್ನು ಹೊಂದಿತ್ತು. ವಿಮಾನ ಇಳಿಯುತ್ತಿದ್ದ ಸಂದರ್ಭದಲ್ಲಿ ತುರ್ತು ಭೂಸ್ಪರ್ಷವಾಗಿದೆ ಎಂಜು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎರಡು ವಾರಗಳ ಹಿಂದೆಯೆಷ್ಟೆ ಇಂಡೋನೇಷಿಯಾದಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿತ್ತು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X