ರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್

Manmohan Singh
ನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ ಅಂತಿಮಗೊಂಡ ನಂತರ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿಗಳನ್ನು ಸಂಜೆ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ 10.30ಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಬೇಕಿತ್ತು. ಆದರೆ, ಕರುಣಾನಿಧಿ ಅವರು 8 ಡಿಎಂಕೆ ಸಂಸದರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದಿದ್ದಾರೆ. ಅತ್ತ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ನಾನೇನು ಕಮ್ಮಿಯಿಲ್ಲ ಎನ್ನುವಂತೆ ಟಿಎಂಸಿಯ 9 ಸಂಸದರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರು ಸಚಿವ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸಿದ್ದರಿಂದ ಸರಕಾರ ರಚನೆಗೆ ವಿಳಂಬವಾಗಿದೆ ಎನ್ನಲಾಗಿದೆ. ಈ ಇಬ್ಬರು ನಾಯಕರ ಸಮಸ್ಯೆಯನ್ನು ಬಗೆಹರಿಸಿ ನಂತರ ಮನಮೋಹನ್ ಸಿಂಗ್ ರಾಷ್ಟ್ರಪತಿಗಳನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ 18 ಸ್ಥಾನಗಳನ್ನು ಡಿಎಂಕೆ ಪಡೆದುಕೊಂಡಿದ್ದರೆ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ 19 ಜನ ಆಯ್ಕೆಯಾಗಿದ್ದಾರೆ. ಯುಪಿಎ ಒಕ್ಕೂಟದಲ್ಲಿ ಈ ಎರಡು ಪಕ್ಷಗಳ ಅತ್ಯಧಿಕ ಸಂಖ್ಯೆಯ ಸಂಸದರಿದ್ದು, ಸಹಜವಾಗಿಯೇ ಹೆಚ್ಚು ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+