ಧನಂಜಯಕುಮಾರ್ ದಿಲ್ಲಿ ವಿಶೇಷ ಪ್ರತಿನಿಧಿ
ಬೆಂಗಳೂರು,
ಮೇ. 22 : ದೆಹಲಿಯಲ್ಲಿ ರಾಜ್ಯ ಸರಕಾರದ ನೂತನ ಪ್ರತಿನಿಧಿಯಾಗಿ ಕೇಂದ್ರದ ಮಾಜಿ ಸಚಿವ ಧನಂಜಯ್ ಕುಮಾರ್ ನೇಮಕಗೊಂಡಿದ್ದಾರೆ. ಸುಭಾಷ್ ಭರಣಿಯಿಂದ ತೆರವಾಗಿದ್ದ ಸ್ಥಾನಕ್ಕೆ ಧನಂಜಯಕುಮಾರ್ ನಿಯೋಜಿತರಾಗಿದ್ದಾರೆ. ಈ ಸ್ಥಾನಕ್ಕೆ ಬೈಕೆರೆ ನಾಗೇಶ್ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಗುರುವಾರ ಬಿಜೆಪಿಯಲ್ಲಿ ನಡೆದ ಬೆಳವಣಿಗೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. id="toptextpromo">ಹೊರಗಿನವರ
ಬದಲು ಪಕ್ಷದಲ್ಲಿ ಕೆಲಸ ಮಾಡಿವದರಿಗೆ ಸ್ಥಾನ ನೀಡಬೇಕು ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿರ್ಧಾರ ಬದಲಿಸಿದರು ಎಂದು ಗೊತ್ತಾಗಿದೆ. ಧನಂಜಯಕುಮಾರ್ ವಾಜಪೇಯಿ ಸರಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿದ್ದರು. ಪುದುಚೇರಿಯಲ್ಲಿ ಪಕ್ಷದ ಉಸ್ತುವಾರಿಯಾಗಿ ಹಾಗೂ ರಾಜ್ಯ ಬಿಜೆಪಿ ವಕ್ತಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದಿಲ್ಲಿಯಲ್ಲಿ ಕೆಲಸ ಮಾಡಿದ ಅನುಭವ ಮತ್ತು ಭಾಷೆಯ ತೊಡಕಿಲ್ಲದ ಕಾರಮ ರಾಜ್ಯದ ಅಭಿವೃದ್ದಿಗೆ ಸಮರ್ಥವಾಗಿ ಕೆಲಸ ಮಾಡಬಹುದು. ಕೇಂದ್ರದಿಂದ ಹೆಚ್ಚಿನ ಅನುದಾನ ಹಾಗೂ ಯೋಜನೆಗಳನ್ನು ತರಲು ಶ್ರಮಿಸುತ್ತಾರೆ ಎಂಬ ವಿಶ್ವಾಸವನ್ನು ಬಿಜೆಪಿ ಮುಖಂಡರು ವ್ಯಕ್ತಪಡಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications