ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು

By Staff
|
Google Oneindia Kannada News

P Chidambaram
ನವದೆಹಲಿ, ಮೇ. 26 : ವೇಲುಪಿಲೈ ಪ್ರಭಾಕರನ್ ಹತ್ಯೆ ನಂತರ ಸಮುದ್ರದ ಮೂಲಕ ಎಲ್ ಟಿಟಿಇ ಉಗ್ರರು ಭಾರತದೊಳಗೆ ಪ್ರವೇಶಿಸುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ತೀರ ಪ್ರದೇಶದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ತಮಿಳುನಾಡು ಸರಕಾರಕ್ಕೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಎಲ್ ಟಿಟಿಇ ಉಗ್ರರ ನುಸುಳುವಿಕೆಯನ್ನು ತಡೆಯಬೇಕೆಂದು ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಅವರು, ಎಲ್ ಟಿಟಿಇ ಉಗ್ರರು ಸಮುದ್ರದ ಮೂಲಕ ಭಾರತದೊಳಗೆ ಪ್ರವೇಶಿಸುತ್ತಿದ್ದಾರೆಂದು ಸುಳಿವು ದೊರೆತಿದೆ. ಇದನ್ನು ತಡೆಗಟ್ಟಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ಮುಖ್ಯವಾಗಿ ತಮಿಳುನಾಡಿಗೆ ಆಗಮಿಸುತ್ತಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಈ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು. ಸೂಕ್ತ ಭದ್ರತೆ ನೀಡುವುದಾಗಿ ಅವರು ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಶ್ರೀಲಂಕಾ ಸರಕಾರ ಘೋಷಿಸಿರುವಂತೆ ಪ್ರಭಾಕರನ್ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ ಅವರು, ಲಂಕಾ ತಮಿಳರಿಗೆ ಭಾರತದಲ್ಲಿ ನೆಲೆಸಲು ಅವಕಾಶ ಮಾಡಿಕೊಡುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲಂಕಾದಲ್ಲಿ ಶಾಂತಿ ನೆಲೆಸಿದೆ. ಅಲ್ಲಿ ಅವರ ನೆಮ್ಮದಿ ಜೀವನ ನಡೆಸಬಹುದು ಎಂದು ಚಿದಂಬರಂ ಹೇಳಿದರು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X