ರಾಜ್ಯದಿಂದ ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟ ಖರ್ಗೆ

Mallikarjun Kharge
ಬೆಂಗಳೂರು, ಮೇ. 28 : ಕಳೆದ 38 ವರ್ಷಗಳಿಂದ ಶಾಸಕರಾಗಿ ರಾಜ್ಯ ರಾಜಕಾರಣ ಮಾಡಿದ್ದ ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಇದೀಗ ರಾಷ್ಟ್ರ ರಾಜಕಾರಣಕ್ಕೆ ಹೆಜ್ಜೆಯಿರಿಸಿದ್ದಾರೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಕ್ಯಾಬಿನೆಟ್ ದರ್ಜೆ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅವರು, ರಾಜ್ಯ ರಾಜಕೀಯದಲ್ಲಿ ಸೋಲಿಲ್ಲದ ಸರದಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

ಗುಲ್ಬರ್ಗಾ ಜಿಲ್ಲೆಯ ಗುರುಮಿಠಕಲ್ ಮೀಸಲು ವಿಧಾನಸಭೆ ಕ್ಷೇತ್ರದಿಂದ ಸತತ ಎಂಟು ಬಾರಿ ಆಯ್ಕಯಾಗಿರುವ ರಾಜ್ಯದ ಏಕೈಕ ಮುಖಂಡ. ಕ್ಷೇತ್ರ ಪುನರ್ ವಿಂಗಡಣೆ ನಂತರ ಗುರುಮಿಠಕಲ್ ಕ್ಷೇತ್ರ ಬದಲಾವಣೆಯಾದ ಹಿನ್ನೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಲಿಂದಲೂ ಜಯಭೇರಿ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.

ಕಾನೂನು ಪದವೀಧರರಾದ ಇವರು 70 ದಶಕದಲ್ಲಿ ರಾಜಕೀಯ ಜೀವನಕ್ಕೆ ಕಾಲಿಟ್ಟರು. ಮುಖ್ಯಮಂತ್ರಿಗಳಾದ ದೇವರಾಜ್ ಅರಸ್, ವೀರೇಂದ್ರ ಪಾಟೀಲ್, ವೀರಪ್ಪ ಮೊಯ್ಲಿ, ಎಸ್ ಬಂಗಾರಪ್ಪ, ಎಂ ಎಸ್ ಕೃಷ್ಣ ಮತ್ತು ಧರ್ಮಸಿಂಗ್ ನೇತೃತ್ವದ ಸರಕಾರದಲ್ಲಿ ಗೃಹ, ಕೈಗಾರಿಕೆ, ಕಂದಾಯ, ನೀರಾವರಿ, ಶಿಕ್ಷಣ, ಸಾರಿಗೆ ಸೇರಿದಂತೆ ಅನೇಕ ಖಾತೆಗಳನ್ನು ಅವರ ಸಮರ್ಥವಾಗಿ ನಿಭಾಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ, ವಿಧಾನಸಭೆ ಪ್ರತಿಪಕ್ಷ ಸ್ಥಾನಗಳನ್ನು ಇವರು ನಿರ್ವಹಿಸಿದ್ದಾರೆ. ಇದೀಗ ಕೇಂದ್ರ ಮಂತ್ರಿ ಯೋಗ ದೊರೆತಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+