ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಸ್ತಿ ಮಾರಾಟ : ವಕ್ಫ್ ಮಂಡಳಿ ಸೂಪರ್ ಸೀಡ್ ?

By Staff
|
Google Oneindia Kannada News

Mumtaz ali khan
ಬೆಂಗಳೂರು, ಮೇ. 29 : ಕೋಟ್ಯಾಂತರ ರುಪಾಯಿ ಬೆಲೆಯ ಆಸ್ತಿಯನ್ನು ಕಡಿಮೆ ಬೆಲೆಗೆ ಕಾನೂನು ಬಾಹಿರವಾಗಿ ಮಾರಾಟ ಮಾಡಿದ ಆರೋದ ಮೇಲೆ ರಾಜ್ಯ ವಕ್ಫ ಮಂಡಳಿ ಸೂಪರ್ ಸೀಡ್ ಮಾಡಲು ಸರಕಾರ ಚಿಂತನೆ ನಡೆಸಿದೆ ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಮಮ್ತಾಜ್ ಅಲಿ ಖಾನ್ ತಿಳಿಸಿದರು.

ಬೆಂಗಳೂರಿನ ಹಾಪ್ ಕಾಮ್ಸ್ ಬಳಿಯಿರುವ ವಕ್ಫ್ ಮಂಡಳಿಗೆ ಸೇರಿದ 2.3 ಎಕರೆ ಜಾಗವನ್ನು ಕಳೆದ ಎರಡು ವರ್ಷಗಳ ಹಿಂದೆ ವಕ್ಫ್ ಮಂಡಳಿ 1 ಕೋಟಿ ರುಪಾಯಿಗೆ ಖಾಸಗೀಯವರಿಗೆ ಮಾರಾಟ ಮಾಡಿರುವುದು ಸಿಓಡಿ ತನಿಖೆಯಿಂದ ಸಾಬೀತಾಗಿದೆ. ಇದರ ನಿಜವಾದ ಬೆಲೆ 20 ಕೋಟಿ ರುಪಾಯಿ ಆಗಿದೆ. ಕಾನೂನಿನಲ್ಲಿ ಮಾರಾಟಕ್ಕೆ ಅವಕಾಶವಿಲ್ಲ. ಇದಕ್ಕೆ ಇಡೀ ಮಂಡಳಿ ಹೊಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡಳಿಗೆ ನೋಟಿಸ್ ನೀಡಿದ್ದು ಉತ್ತರ ನಿರೀಕ್ಷಿಸಲಾಗುತ್ತಿದೆ.

ಸಮುದಾಯದ ಆಸ್ತಿ ರಕ್ಷಣೆ ಮಾಡಬೇಕಾದ ಮಂಡಳಿಯೇ ಈ ರೀತಿ ಮಾಡಿರುವುದು ಸರಿಯಲ್ಲ. ಆದ್ದರಿಂದ ಮಂಡಳಿಯನ್ನು ಸೂಪರ್ ಸೀಡ್ ಮಾಡುವ ಚಿಂತನೆ ನಡೆಸಲಾಗಿದೆ ಎಂದು ಸಚಿವರು ವಿವರಿಸಿದರು. ಈ ಪ್ರಕರಣದಲ್ಲಿ ತಮಗೆ ಯಾರ ಬಗ್ಗೆ ದ್ವೇಷವಿಲ್ಲ. ಆದರೆ, ಭ್ರಷ್ಟರಿಗೆ ರಕ್ಷಣೆ ಇಲ್ಲ ಎಂದು ಸ್ಪಷ್ಟಪಡಿಸಿದ ಖಾನ್, ಅಡ್ವೋಕೇಟ್ ಜನರಲ್ ಸಲಹೆ ಪಡೆದು ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X