ನೂತನ ಕೇಂದ್ರ ಸರಕಾರದ ಚೊಚ್ಚಲ ಸಂಪುಟ ಸಭೆ

ನವದೆಹಲಿ, ಮೇ.30 : ನೂತನವಾಗಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟದ ಪ್ರಥಮ ಸಭೆ ಇಂದು ಆರಂಭವಾಗಿದೆ. ಇಂದಿನ ಸಭೆ ಮುಖ್ಯವಾಗಿ ಲೋಕಸಭಾಧ್ಯಕ್ಷರ ಆಯ್ಕೆ ಮತ್ತು ಸರಕಾರದ ಪ್ರಮುಖ ನಿರ್ಧಾರ ಹಾಗೂ ಯೋಜನೆಗಳು ಕುರಿತಂತೆ ಸಮಗ್ರ ಚರ್ಚೆ ನಡೆಯಲಿದೆ. ಜೂನ್ 4 ರಂದು ಲೋಕಸಭೆ ಮತ್ತು ರಾಜ್ಯಸಭೆ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಭಾಷಣ ಮಾಡುವ ಸಾಧ್ಯತೆ ಇದೆ.

ಕಳೆದ ಯುಪಿಎ ಸರಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಇನ್ನಷ್ಟು ಪರಿಣಾಮಕಾರಿಯಾಗಿ ಬಲಪಡಿಸುವುದು ಕೇಂದ್ರ ಸರಕಾರದ ಏಕೈಕ ಮಹತ್ವದ ಯೋಜನೆಯಾಗಿದೆ. ಹಾಗೂ ಆರ್ಥಿಕ ಹಿಂಜರಿತದಿಂದ ತೀವ್ರ ಸಂಕಷ್ಟ ಅನುಭವಿಸುತ್ತಿರುವ ವಲಯದ ಕಡೆಗೆ ಗಮನ ಹರಿಸುವುದರ ಜೊತೆಗೆ ಬಲಪಡಿಸುವ ನಿಟ್ಟಿನಲ್ಲಿ ಇಂದಿನ ಸಭೆಯಲ್ಲಿ ಪ್ರಮುಖ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+