ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದಿ ಕಾಮಣ್ಣರ ವಿರುದ್ಧ ಎನ್ಎಸ್ಎ ಪ್ರಕರಣ

By Staff
|
Google Oneindia Kannada News

Now NSA against eve teasers in UP
ಕಾನ್ಪುರ್, ಮೇ. 30 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಯುವನಾಯಕ ವರುಣ್ ಗಾಂಧಿ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ದಾಖಲಿಸಿದ ಪ್ರಕರಣದ ಬೆನ್ನಲ್ಲೇ ಹುಡುಗಿಯರ ಚುಡಾಯಿಸುವ ಬೀದಿ ಕಾಮಣ್ಣ ವಿರುದ್ಧವೂ ಎನ್ಎಸ್ಎ ದಾಖಲಿಸಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಹುಡುಗಿಯರ ಚುಡಾಯಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ಪೊಲೀಸ್ ಠಾಣೆಯಲ್ಲೂ ಅನೇಕ ಪ್ರಕರಣಗಳು ದಾಖಲಾಗಿವೆ. ಇದನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ದಿಟ್ಟ ನಿರ್ಧಾರ ಕೈಗೊಂಡಿದ್ದು, ಹುಡುಗಿಯರನ್ನು ಚುಡಾಯಿಸುವ ವ್ಯಕ್ತಿಗಳ ವಿರುದ್ಧ ಎನ್ ಎಸ್ಎ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕಾನ್ಪುರದಲ್ಲಿ ಬುಧವಾರ ಹುಡುಗಿಯರನ್ನು ಚುಡಾಯಿಸಿದ ಮೂವರ ವಿರುದ್ಧ ಎನ್ ಎಸ್ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಪ್ರತಿ ದಿನ ಸರಾಸರಿ ಮೂರು ಚುಡಾಯಿಸಿದ ಪ್ರಕರಣಗಳು ದಾಖಲಾಗುತ್ತಿವೆ ಎಂದು ಅಂಕಿ ಅಂಶಗಳು ಹೇಳುತ್ತವೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X