ಆಸ್ಟ್ರೇಲಿಯಾ; 18 ಭಾರತೀಯ ವಿದ್ಯಾರ್ಥಿಗಳ ಬಂಧನ

Australia police stall Indian protest
ಮೆಲ್ ಬೋರ್ನ್, ಜೂ.1: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಅಲ್ಲಿನ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ 18 ಮಂದಿ ಭಾರತೀಯರನ್ನು ಆಸ್ಟ್ರೇಲಿಯಾ ಪೊಲೀಸರು ಬಂಧಿಸಿದ್ದಾರೆ.

ಅಲ್ಲಿನ ನಿಯಮಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡಿಸಿದ್ದೇ ಅಲ್ಲದೆ, ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂಬ ಆರೋಪದಡಿ ಆಸ್ಟ್ರೇಲಿಯಾ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ ಆಸ್ಟ್ರೇಲಿಯಾದಲ್ಲಿನ ಭಾರತೀಯ ವಿದ್ಯಾರ್ಥಿಗಳಿಗೆ ಸಂಪೂರ್ಣ ಭದ್ರತೆ ಕಲ್ಪಿಸುವ ವಿಚಾರದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿರುವುದಾಗಿ ಭಾರತೀಯ ಕಾನ್ಸುಲೇಟ್ ಜನರಲ್ ಅನಿತಾ ನಾಯರ್ ತಿಳಿಸಿದ್ದಾರೆ.

ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ತಾವು ಪರಿಶೀಲಿಸಿದ್ದೇವೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಅನಿತಾ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ವಿದ್ಯಾರ್ಥಿಗಳ ಬಂಧನಕ್ಕೆ ಸಂಬಂಧಿಸಿದಂತೆ ತಮಗೆ ಯಾವುದೇ ಮಾಹಿತಿ ಇದುವರೆಗೂ ಬಂದಿಲ್ಲ ಎಂದು ಅನಿತಾ ತಿಳಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+